Breaking News

ಪುಸ್ತಕ ಮೇಳದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿ

Spread the love

ಬೆಂಗಳೂರು: “ನಾನು ಜೀವನದಲ್ಲಿ ಪುಸ್ತಕ ಹಿಡಿದು ಓದಿದವನಲ್ಲ, ಶಾಲೆಯಲ್ಲಿ ಹೇಗೋ ಅಲ್ಪಸ್ವಲ್ಪ ಓದಿ ಪಾಸ್ ಆದೆ. ಡಿಗ್ರಿಯಲ್ಲಿರುವಾಗ ಓದಲೇ ಇಲ್ಲ. ನಾನು ಮಂತ್ರಿಯಾದ ನಂತರ ಮುಕ್ತ ವಿವಿಯಲ್ಲಿ ಪದವಿ ಪಡೆದೆ” ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಆಯೋಜಿಸಿರುವ ಪುಸ್ತಕ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ನಾನು ಮೊದಲ ಬಾರಿಗೆ ವಿಧಾನ ಸಭೆಗೆ ಬಂದಾಗ, ರಾಮಕೃಷ್ಣ ಹೆಗಡೆ, ವೀರೇಂದ್ರ ಪಾಟೀಲ್, ಬಂಗಾರಪ್ಪ, ಕಾಗೋಡು ತಿಮ್ಮಪ್ಪ, ನಾಣಯ್ಯ ಅವರಂತಹ ಘಟಾನುಘಟಿಗಳು ಮಾತನಾಡುವಾಗ ನಾನು ಹೆಚ್ಚು ಓದಬೇಕಿತ್ತು ಎಂದು ಅನ್ನಿಸಿತ್ತು” ಎಂದು ಹೇಳಿದರು.

ನಾನು ಓದಬೇಕು ಎಂದು ಪುಸ್ತಕ ಖರೀದಿ ಮಾಡುತ್ತೇನೆ. ಆದರೆ ಒಂದು ಪುಟ ಓದುವುದರೊಳಗೆ ಸುಸ್ತಾಗುತ್ತೇನೆ. ನಮ್ಮ ಮುಖ್ಯಮಂತ್ರಿಗಳು ದಿನ ಬೆಳಗ್ಗೆ ಪತ್ರಿಕೆ ಹಾಗೂ ಹೆಚ್ಚು ಪುಸ್ತಕ ಓದುತ್ತಾರೆ ಎಂದು ಕೇಳಿದ್ದೇನೆ ಎಂದರು.

“ಪುಸ್ತಕಗಳು ಜ್ಞಾನದ ಭಂಡಾರ. ಈಗ ಮೊಬೈಲ್ ಫೋನ್​​​ಗಳು ಬಂದಿದ್ದು, ಎಲ್ಲಾ ಮಾಹಿತಿಗಳು ಅಂಗೈಯಲ್ಲಿ ಲಭ್ಯವಿದೆ. ಅಷ್ಟರ ಮಟ್ಟಿಗೆ ತಂತ್ರಜ್ಞಾನ ಮುಂದುವರೆದಿದೆ. ಆದರೂ ಪುಸ್ತಕಗಳನ್ನು ಓದುವ ಹವ್ಯಾಸ ಇಟ್ಟುಕೊಳ್ಳಬೇಕು” ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ