Breaking News

ಆರೋಪಿಗೆ ಪೊಲೀಸರು ವಾಟ್ಸ್​​ಆ್ಯಪ್​ನಲ್ಲಿ ಜಾರಿ ಮಾಡಿದ್ದ ನೋಟಿಸ್​ ರದ್ದುಪಡಿಸಿದ ಹೈಕೋರ್ಟ್

Spread the love

ಬೆಂಗಳೂರು: ಇತರರ ಗುರುತಿನ ಕಳವು ಮಾಡಿ ವಂಚಿಸಿದ್ದ ಆರೋಪ ಹೊತ್ತಿರುವ ವಿದ್ಯಾರ್ಥಿಗೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸರು ವಾಟ್ಸ್​​ಆ್ಯಪ್ ಮೂಲಕ ಜಾರಿ ಮಾಡಿದ್ದ ನೋಟಿಸ್​ ಅನ್ನು ಹೈಕೋರ್ಟ್ ರದ್ದುಗೊಳಿಸಿ ಆದೇಶಿಸಿದೆ.

ವಿದ್ಯಾರ್ಥಿ ಪವನ್​ ಕುಮಾರ್​ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್​.ಕೃಷ್ಣಕುಮಾರ್​ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಅಲ್ಲದೆ, ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ, 2023 (ಬಿಎನ್ಎಸ್ಎಸ್) ಅಥವಾ ಹಿಂದಿನ ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಅಡಿಯಲ್ಲಿ ವಾಟ್ಸ್​​ಆ್ಯಪ್​ಗಳ ಮೂಲಕ ನೋಟಿಸ್ ಜಾರಿ ಮಾಡುವುದಕ್ಕೆ ಅವಕಾಶವಿಲ್ಲ ಎಂಬುದಾಗಿ ಪ್ರಕರಣವೊಂದರ ವಿಚಾರಣೆ ವೇಳೆ ಸುಪ್ರೀಂ ಕೋರ್ಟ್ ಆದೇಶಿಸಿದೆ ಎಂದು ತಿಳಿಸಿ, ನೋಟಿಸ್​ ರದ್ದುಗೊಳಿಸಿ ಆದೇಶಿಸಿದೆ. ನೋಟಿಸ್​ ರದ್ದುಗೊಳಿಸುತ್ತಿದ್ದು, ಹೊಸದಾಗಿ ವಿಚಾರಣಾ ಪ್ರಕ್ರಿಯೆಯನ್ನು ಪ್ರಾರಂಭಿಸುವಂತೆ ತನಿಖಾಧಿಕಾರಿಗಳಿಗೆ ಸೂಚನೆ ನೀಡಿ ಆದೇಶಿಸಿದೆ.

ಬಿಎನ್ಎಸ್ಎಸ್ ಸೆಕ್ಷನ್​ 35 ಅಥವಾ ಸಿಆರ್​​ಪಿಸಿಯ ಸೆಕ್ಷನ್ 41 ಎ ಪ್ರಕಾರ ಅಪರಾಧ ಕೃತ್ಯದಲ್ಲಿ ಭಾಗಿಯಾಗಿರುವ ಶಂಕಿತ ವ್ಯಕ್ತಿಯನ್ನು ಬಂಧಿಸುವ ಅಗತ್ಯವಿಲ್ಲದ ಕ್ರಿಮಿನಲ್ ಪ್ರಕರಣಗಳಲ್ಲಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್​ ನೀಡಬಹುದಾಗಿದೆ. ಆದರೆ, ಕಳೆದ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್ ಆರೋಪಿಗಳಿಗೆ ನೋಟಿಸ್​ ನೀಡುವಲ್ಲಿ ಪೊಲೀಸರು ವಾಟ್ಸ್​​ಆ್ಯಪ್ ಅಥವಾ ಇತರ ಎಲೆಕ್ಟ್ರಾನಿಕ್ ಮಾಧ್ಯಮಗಳನ್ನು ಬಳಸುವಂತಿಲ್ಲ ಎಂಬುದಾಗಿ ತಿಳಿಸಿದೆ. ಹೀಗಾಗಿ, ಈ ಪ್ರಕ್ರಿಯೆನ್ನು ಅನುಮತಿಸಲಾಗುವುದಿಲ್ಲ ಎಂಬುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ