Breaking News

ಸಿದ್ದರಾಮಯ್ಯ ದಾಖಲೆಯ ಬಜೆಟ್​: ದಿನಾಂಕ, ಸಮಯ ಮತ್ತು ಎಲ್ಲಿ ಲೈವ್ ವೀಕ್ಷಿಸಬೇಕು?

Spread the love

ಬೆಂಗಳೂರು, (ಮಾರ್ಚ್​ 02) : ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರದಿಂದ (ಮಾರ್ಚ್​ 03) ಆರಂಭವಾಗಲಿದ್ದು, ಮಾರ್ಚ್​ 07ರಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬಜೆಟ್​ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಅವರು ದಾಖಲೆಯ 16ನೇ ಬಜೆಟ್‌ ಹಾಗೂ ಮುಖ್ಯಮಂತ್ರಿ ಆಗಿ 9ನೇ ಬಜೆಟ್‌ ಮಂಡನೆ ಮಾಡಲಿದ್ದಾರೆ. ರಾಜ್ಯದಮಟ್ಟಿಗೆ ಅತ್ಯಧಿಕ ಬಜೆಟ್‌ ಮಂಡನೆ ಮಾಡಿರುವ ದಾಖಲೆಯನ್ನು ಈಗಾಗಲೇ ಹೊಂದಿರುವ ಸಿದ್ದರಾಮಯ್ಯ, ಗ್ಯಾರಂಟಿಗಳ ಒತ್ತಡದ ನಡುವೆ ಯಾವ ರೀತಿಯ ಬಜೆಟ್‌ ಮಂಡಿಸಲಿದ್ದಾರೆ. ಯಾವ ಹೊಸ ಕಾರ್ಯಕ್ರಮಗಳನ್ನು ನೀಡಲಿದ್ದಾರೆ ಎಂಬ ಬಗ್ಗೆ ತೀವ್ರ ಕುತೂಹಲ ಹುಟ್ಟಿಕೊಂಡಿವೆ.

ಬಜೆಟ್ ಲೈವ್ ವೀಕ್ಷಿಸುವುದೇಗೆ?

ಸಿಎಂ ಸಿದ್ದರಾಮಯ್ಯನವರು ಮಂಡಿಸುವ ಬಜೆಟ್​ ಅನ್ನು ಸರ್ಕಾರದ ವಿಧಾನಸಭೆ ಅಧಿವೇಶನದ ವೆಬ್ ಪೋರ್ಟಲ್​ನಲ್ಲಿ ಲೈವ್ ವೀಕ್ಷಿಸಬಹುದು. ದೂರದರ್ಶನ (ಡಿಡಿ ನ್ಯೂಸ್) ಹಾಗೂ ಇತರ ಸುದ್ದಿ ವಾಹಿನಿಗಳಲ್ಲಿ ಬಜೆಟ್ ಮಂಡನೆ ನೇರ ಪ್ರಸಾರ ವೀಕ್ಷಿಸಬಹುದು. ಹಾಗೂ ಟಿವಿ9 ಕನ್ನಡ ಡಿಜಿಟಲ್​ನಲ್ಲೂ ಬಜೆಟ್​ನ ಕ್ಷಣ ಕ್ಷಣದ ಮಾಹಿತಿಯನ್ನು ಪಡೆಯಬಹುದು. ಇನ್ನು ಮಾರ್ಚ್ 7ರಂದು ಸಿಎಂ ಸಿದ್ದರಾಮಯ್ಯನವರು ಸಚಿವ ಸಂಪುಟ ಸಭೆ ನಡೆಸಿ ಬಜೆಟ್​ಗೆ ಅನುಮೋದನೆ ಪಡೆದುಕೊಳ್ಳಲಿದ್ದಾರೆ. ಬಳಿಕ ಸಿಎಂ ವಿಧಾನಸಭೆಯಲ್ಲಿ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಾರಿ ಕುಳಿತುಕೊಂಡೇ ಸಿಎಂ ಬಜೆಟ್‌ ಮಂಡನೆ ಸಾಧ್ಯತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೊಣಕಾಲು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದು, ಅಧಿವೇಶನಕ್ಕೆ ಆಗಮಿಸುವ ಸಲುವಾಗಿ ವಿಧಾನಸೌಧದ ಪೂರ್ವ ದ್ವಾರದ ಬಳಿ ಪ್ರತ್ಯೇಕ ರ್‍ಯಾಂಪ್‌ ವ್ಯವಸ್ಥೆ ಮಾಡಲಾಗಿದೆ. ಇನ್ನು ಬಜೆಟ್‌ ದಿನ ಕುಳಿತುಕೊಂಡೇ ಬಜೆಟ್‌ ಭಾಷಣ ಓದಲಿದ್ದಾರೆ. ಇನ್ನು ವಿಧಾನಮಂಡಲ ಅಧಿವೇಶನ ಮಾ.3 ರಿಂದ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಅಧಿವೇಶನದಲ್ಲಿ ಪ್ರತಿಪಕ್ಷಗಳನ್ನು ಸಮರ್ಥವಾಗಿ ಎದುರಿಸುವ ಕುರಿತು ಚರ್ಚಿಸಲು ಮಾ.4 ರಂದು ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ