Breaking News

ರಜೆಗೆ ಬಂದಿದ್ದ ಬಿಎಸ್‌ಎಫ್ ಯೋಧ ಅನಾರೋಗ್ಯಕ್ಕೆ ತುತ್ತಾಗಿ ಸಾವು: ಗಣ್ಯರ ಸಂತಾಪ

Spread the love

ರಜೆಗೆ ಬಂದಿದ್ದ ಬಿಎಸ್‌ಎಫ್ ಯೋಧ ಅನಾರೋಗ್ಯಕ್ಕೆ ತುತ್ತಾಗಿ ಸಾವು:
ಗಣ್ಯರ ಸಂತಾಪ
ರಜೆಗೆ ಬಂದಿದ್ದ ಬಿಎಸ್‌ಎಫ್ ಯೋಧ ಅನಾರೋಗ್ಯದಿಂದ ಸಾವನ್ನಪ್ಪಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಬೊಮ್ಮನಜೋಗಿಯಲ್ಲಿ ನಡೆದಿದೆ.
ಮಲ್ಲು ಪೂಜಾರಿ ನಿಧನ ಹೊಂದಿದ ಯೋಧ. ಜಮ್ಮು-ಕಾಶ್ಮೀರದಲ್ಲಿ ಬಿಎಸ್ಎಫ್ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಮಲ್ಲು ಕಳೆದ ವಾರ ರಜೆ ನಿಮಿತ್ತ ಸ್ವಗ್ರಾಮ ಬೊಮ್ಮನಜೋಗಿಗೆ ಆಗಮಿಸಿದ್ದ. ಆದ್ರೆ ಅಚಾನಕ್ಕಾಗಿ ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆ ಸೊಲ್ಲಾಪುರ ಆಸ್ಪತ್ರೆಗೆ ದಾಖಲಾಗಿದ್ದ. ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ.
ಕಳೆದ 17 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ. ಅರುಣಾಚಲ ಪ್ರದೇಶ, ಕೊಲ್ಕತ್ತಾ, ಜಮ್ಮು-ಕಾಶ್ಮೀರದ ಲೇ ಲಡಾಖ್ ನಲ್ಲಿ ಕರ್ತವ್ಯ ನಿರ್ವಹಿಸಿದ್ದ. ಸಧ್ಯ ಯೋಧನ ನಿಧನಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ..

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ