Breaking News

ಕೊಪ್ಪಳ ಜನರ ಹೋರಾಟಕ್ಕೆ ಸಂದ ಜಯ: ಬಲ್ಡೋಟ ಪ್ಯಾಕ್ಟರಿ ಕಾಮಗಾರಿ ಸ್ಥಗಿತಕ್ಕೆ ಸಿಎಂ ಸೂಚನೆ

Spread the love

ಕೊಪ್ಪಳ, (ಮಾರ್ಚ್ 04): ನಗರದಲ್ಲಿ ಬಲ್ಟೋಟ ಸ್ಟೀಲ್ ಪ್ಯಾಕ್ಟರಿಗೆ ನಿರ್ಮಾಣಕ್ಕೆ ಭಾರೀ ವಿರೋಧ ವ್ಯಕ್ತವಾಗಿದ್ದು. ಈಗಾಗಲೇ ಕೊಪ್ಪಳ ಬಂದ್ ಕೂಡಾ ನಡೆಸಿದ್ದಾರೆ. ಸ್ವತ ಗವಿಮಠದ ಸ್ವಾಮೀಜಿ, ಯಾವುದೇ ಕಾರಣಕ್ಕೂ ಪ್ಯಾಕ್ಟರಿ ಆರಂಭವಾಗಬಾರದು ಎಂದು ಬೀದಿಗಳಿದು ಹೋರಾಟ ಮಾಡಿದ್ದಾರೆ. ಈ ಸಂಬಂಧ ಇಂದು(ಮಾರ್ಚ್ 04) ಜನಪ್ರತಿನಿಧಿಗಳು ಮತ್ತು ಹೋರಾಟಗಾರರ ನಿಯೋಗ, ಸಿಎಂ ಭೇಟಿ ಮಾಡಿದ್ದು, ಕೂಡಲೇ ಫ್ಯಾಕ್ಟರಿ ಕಾಮಗಾರಿ ಸ್ಥಗಿತಗೊಳಿಸುವಂತೆ ಸಿಎಂ ಸಿದ್ದರಾಮಯ್ಯನವರು ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.

ಈ ಮೂಲಕ ಕೊಪ್ಪಳ ಜಿಲ್ಲಾ ಜನರು ಹೋರಾಟಕ್ಕೆ ಜಯ ಸಿಕ್ಕಂತಾಗಿದ್ದು, ತುಸು ನಿಟ್ಟುಸಿರು ಬಿಡುವಂತೆ ಮಾಡಿದೆ.ಹೌದು.. ಕೊಪ್ಪಳ ನಗರದಿಂದ ಕೂಗಳತೆ ದೂರದಲ್ಲಿ, ರಾಜ್ಯದ ಎರಡನೇ ಅತಿ ದೊಡ್ಡ ಸ್ಟೀಲ್ ಪ್ಯಾಕ್ಟರಿ ಆರಂಭಕ್ಕೆ ಬಲ್ಡೋಟ ಸಂಸ್ಥೆ ಮುಂದಾಗಿದೆ.

ಬರೋಬ್ಬರಿ 54 ಸಾವಿರ ಕೋಟಿ ವೆಚ್ಚದಲ್ಲಿ ವಾರ್ಷಿಕ 10.50 ಮಿಲಿಯನ್ ಟನ್ ಕಬ್ಬಿಣ ಉತ್ಪಾಧನೆ ಸಾಮಾರ್ಥ್ಯದ ಘಟಕದ ನಿರ್ಮಾಣಕ್ಕೆ ಸಿದ್ದತೆ ಜೋರಾಗಿ ನಡೆಸಿದೆ. ಈಗಾಗಲೇ ಅನೇಕ ವರ್ಷಗಳ ಹಿಂದೆಯೇ 1034 ಎಕರೆ ಭೂಮಿಯನ್ನು ಕಂಪನಿ ರೈತರಿಂದ ಪಡೆದಿದ್ದು, ಇದೀಗ ಘಟಕ ಆರಂಭದ ಕೆಲಸ ಆರಂಭಿಸಿದೆ. ಆದ್ರೆ ಇದೀಗ ಕಾಮಗಾರಿ ನಡೆಸದಂತೆ ಸಿಎಂ ಸಿದ್ದರಾಮಯ್ಯನವರು ಸೂಚನೆ ನೀಡಿದ್ದಾರೆ.ಕಳೆದ ಪೆಬ್ರವರಿ 24 ರಂದು ಗವಿಸಿದ್ದೇಶ್ವ ಸ್ವಾಮೀಜಿ ನೇತೃತ್ವದಲ್ಲಿ ಬಂದ್ ಆಚರಿಸಿ, ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ವತ ಗವಿಮಠದ ಸ್ವಾಮೀಜಿ ಕೂಡಾ, ಯಾವುದೇ ಕಾರಣಕ್ಕೂ ಪ್ಯಾಕ್ಟರಿ ಆರಂಭಕ್ಕೆ ಸರ್ಕಾರ ಅವಕಾಶ ನೀಡಬಾರದು ಅಂತ ಹೇಳಿದ್ದಾರೆ. ಅದರ ಮುಂದುವರಿದ ಭಾಗವಾಗಿ ಇಂದು, ಕೊಪ್ಪಳ ಜಿಲ್ಲೆಯ ಸರ್ವಪಕ್ಷಗಳ ಶಾಸಕರು, ಮಾಜಿ ಶಾಸಕರು,ಅನೇಕ ಮುಖಂಡರು ಸಿಎಂ ಬೇಟಿ ಮಾಡಿದ್ರು. ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ, ಶಾಸಕರಾದ ಜನಾರ್ದನ ರೆಡ್ಡಿ, ರಾಘವೇಂದ್ರ ಹಿಟ್ನಾಳ್, ಸಂಸದ ರಾಜಶೇಖರ ಹಿಟ್ನಾಳ್, ಸಿಎಂ ರನ್ನು ಬೇಟಿಯಾಗಿ ಪ್ಟಾಕ್ಟರಿ ಆರಂಭಕ್ಕೆ ಅವಕಾಶ ನೀಡಬಾರದು ಅಂತ ಮನವಿ ಮಾಡಿದ್ದಾರೆ. ಇದಕ್ಕೆ ಸಿಎಂ ಕೂಡಾ ಸ್ಪಂದಿಸಿದ್ದಾರೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ