Breaking News

ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಬೇಡಿಕೆ ಪಟ್ಟಿಸಿದ್ಧ

Spread the love

ಬೆಂಗಳೂರು, ಮಾರ್ಚ್​ 5: ಸಚಿವ ಸತೀಶ್ ಜಾರಕಿಹೊಳಿ ನಿವಾಸದಲ್ಲಿ ಮಂಗಳವಾರ ರಾತ್ರಿ ಹಿಂದುಳಿದ ವರ್ಗಗಳ ಶಾಸಕರು ಸಭೆ ಸೇರಿ ಅನೇಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಕರ್ನಾಟಕದಲ್ಲಿ ಆಡಳಿತಾರೂಢ ಕಾಂಗ್ರೆಸ್​ನಲ್ಲಿ ಸಿಎಂ ಹುದ್ದೆ ಕುರಿತ ಚರ್ಚೆ, ಬಣ ಜಗಳ ನಡೆಯುತ್ತಿರುವ ಬೆನ್ನಲ್ಲೇ ಈ ಸಭೆ ನಡೆದಿದೆ. ಸಭೆಯಲ್ಲಿ ಎಸ್​​ಸಿ, ಎಸ್​ಟಿ ಸಮುದಾಯಗಳ ಶಾಸಕರು ಬೇಡಿಕೆ ಪಟ್ಟಿಯನ್ನೇ ಸಿದ್ಧಪಡಿಸಿದ್ದಾರೆ.

ಸಮುದಾಯದ ಬೇಡಿಕೆಗಳೇನು?

  • ಎಸ್​​ಸಿ, ಎಸ್​ಟಿ ಬ್ಯಾಕ್‌ಲಾಗ್ ಹುದ್ದೆಗಳನ್ನು ಶೀಘ್ರ ಭರ್ತಿ ಮಾಡಿಕೊಳ್ಳುವುದು.
  • ಕರ್ನಾಟಕ ರಾಜ್ಯದಲ್ಲಿ ಒಂದು ಬುಡಕಟ್ಟು ವಿಶ್ವವಿದ್ಯಾಲಯ (TRIBAL UNIVERSITY) ಸ್ಥಾಪಿಸುವುದು.
  • ಸುರಪುರ ತಾಲ್ಲೂಕಿನ ಬಂಡೊಳ್ಳಿಯಲ್ಲಿ ಇರುವ 17 ಎಕರೆ 21 ಗುಂಟೆ ಜಾಗದಲ್ಲಿ ಶೈಕ್ಷಣಿಕ ಸಂಸ್ಥೆಗಳನ್ನು ಪ್ರಾರಂಭಿಸಲು ಸುಮಾರು 25.00 ಕೋಟಿ ರೂ.ಗಳ ಅನುದಾನಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.
  • ಪ್ರತೀ ವರ್ಷ ಸರ್ಕಾರದಿಂದ ಬುಡಕಟ್ಟು ವಾಲ್ಮೀಕಿ ಜನಾಂಗದ ಇತಿಹಾಸ, ಸಂಸ್ಕೃತಿ, ಕಲೆಗಳನ್ನು ಪ್ರೋತ್ಸಾಹಿಸಿ ಜನಗಳಿಗೆ ಪರಿಚಯಿಸುವುದು, ಚಿತ್ರದುರ್ಗದಲ್ಲಿ ದುರ್ಗೋತ್ಸವ ಎಂಬ ಕಾರ್ಯಕ್ರಮವನ್ನು ರಾಣಿಚನ್ನಮ್ಮ ಇತಿಹಾಸ ಬಿಂಬಿಸುವ ಕಿತ್ತೂರು ಉತ್ಸವ, ಹಂಪಿ ಉತ್ಸವ ಮಾದರಿಯಲ್ಲಿ ಆಯೋಜಿಸುವುದು. ಇದು ನಾಯಕರ ಪರಾಕ್ರಮಗಳ ಕಲೆಗಳನ್ನು ಬಿಂಬಿಸುವ ಸಾಂಸ್ಕೃತಿಕ ದುರ್ಗೋತ್ಸವ ಆಗಬೇಕೆಂದು ಸರ್ಕಾರಕ್ಕೆ ಮನವಿ ಸಲ್ಲಿಸುವುದು.
  • ಇತ್ತೀಚೆಗೆ ರಾಯಚೂರಿನಲ್ಲಿ 25 ಮಂದಿ ಎಸ್‌ಸಿ ಎಸ್‌ಟಿ ಸಮುದಾಯದ ಹೋರಾಟಗಾರರ ಮೇಲೆ ಹೂಡಿದ ಕೇಸ್‌ಗಳನ್ನು ಸರ್ಕಾರ ತಕ್ಷಣ ಹಿಂತೆಗೆದುಕೊಳ್ಳಲು ಒತ್ತಾಯಿಸುವುದು.
  • ಬೆಂಗಳೂರಿನ ಬಸವನಗುಡಿಯಲ್ಲಿರುವ ಶ್ರೀ ಶಿವಭಕ್ತ ಬೇಡರ ಕಣ್ಣಪ್ಪ ಸ್ವಾಮಿ ದೇವಸ್ಥಾನ ಶ್ರೀ ಮಹರ್ಷಿ ವಾಲ್ಮೀಕಿ ಆಶ್ರಮ ಮಹಾಸಂಸ್ಥಾನಕ್ಕೆ ಹೊಂದಿಕೊಂಡಿರುವ ನಿವೇಶನವನ್ನು ಸರ್ಕಾರದಿಂದ ಮಂಜೂರು ಮಾಡಿಸುವ ಕುರಿತು ಒತ್ತಡ ಹೇರುವುದು.
  • ಪರಿಶಿಷ್ಟ ಪಂಗಡದ ಜನಾಂಗಕ್ಕೆ ಮೀಸಲಿಟ್ಟ ಹಣವು ದುರ್ಬಳಕೆಯಾಗದೇ ಸಮರ್ಪಕವಾಗಿ ಜನಾಂಗಕ್ಕೆ ತಲುಪಿಸಿ ನಿಗದಿತ ಅವಧಿಯೊಳಗೆ ಪೂರ್ತಿ ಹಣ ಖರ್ಚಾಗುವಂತೆ ನೋಡಿಕೊಳ್ಳುವುದು

Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ