Breaking News

ಪ್ರೇಮಿಗಳ ದುರಂತ ಸಾವು

Spread the love

ಬೆಳಗಾವಿ, (ಮಾರ್ಚ್ 04): ಪಾಗಲ್ ಪ್ರೇಮಿಯೊಬ್ಬ ಪ್ರೇಯಿಸಿಯ ಕತ್ತು ಸೀಳೆ ಬರ್ಬರವಾಗಿ ಹತ್ಯೆ ಮಾಡಿ ಬಳಿಕ ತಾನೂ ಸಹ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿ ನಡೆದಿದೆ. ಐಶ್ವರ್ಯಾ ಮಹೇಶ್ ಲೋಹಾರ(18) ಕೊಲೆಯಾದ ಯುವತಿ. ಇನ್ನು ಆತ್ಮಹತ್ಯೆ ಮಾಡಿಕೊಂಡ ಪ್ರಿಯಕರನನ್ನು ಪ್ರಶಾಂತ್ ಯಲ್ಲಪ್ಪ ಕುಂಡೇಕರ(29) ಎಂದು ಗುರುತಿಸಲಾಗಿದೆ. ಇಂದು (ಮಾರ್ಚ್​ 04) ಸಂಜೆ ಈ ಜೋಡಿ, ಐಶ್ವರ್ಯಾ ಚಿಕ್ಕಮ್ಮನ ಮನೆಗೆ ಬಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದೆ. ನಂತರ ಪ್ರಶಾಂತ್, ಚಾಕುವಿನಿಂದ ಪ್ರೇಯಸಿ ಐಶ್ವರ್ಯಾಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಅದೇ ಚಾಕುವಿನಿಂದ ತನ್ನ ಕತ್ತು ಕೊಯ್ದುಕೊಂಡು ಪ್ರಾಣಬಿಟ್ಟಿದ್ದಾನೆ.

ಐಶ್ವರ್ಯಾ ಮಹೇಶ್ ಲೋಹಾರ ಹಾಗೂ ಪ್ರಶಾಂತ್ ಯಲ್ಲಪ್ಪ ಕುಂಡೇಕರ ಇಬ್ಬರು ಪರಸ್ಪರ ಪ್ರೀತಿಸುತ್ತಿದ್ದು, ಈ ಜೋಡಿ ಇಂದು ಬೆಳಗಾವಿಯ ಶಹಾಪುರದ ನವಿಗಲ್ಲಿಯಲ್ಲಿರುವ ಐಶ್ವರ್ಯಾಳ ಚಿಕ್ಕಮ್ಮನ ಮನೆ ಬಂದಿತ್ತು. ಆಗ ಏನಾಯ್ತೋ ಏನೋ ಇಬ್ಬರು ವಿಷಸೇವಿಸಿ ಆತ್ಮಹತ್ಯೆ ಯತ್ನಿಸಿದ್ದಾರೆ. ಬಳಿಕ ಪ್ರಶಾಂತ್​ ಏಕಾಏಕಿ ಚಾಕುವಿನಿಂದ ಪ್ರೇಯಸಿ ಐಶ್ವರ್ಯಳ ಕತ್ತು ಸೀಳಿ ಕೊಲೆ ಮಾಡಿದ್ದಾನೆ. ಬಳಿಕ ಪ್ರಕಾಶ್​ ಅದೇ ಚಾಕುವಿನಿಂದ ತನ್ನ ಕುತ್ತಿಗೆ ಕೊಯ್ದುಕೊಂಡು ಪ್ರಾಣ ಬಿಟ್ಟಿದ್ದಾನೆ.

ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಹಾಪುರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ನಂತರ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಹಾಗೂ ಡಿಸಿಪಿ ರೋಹನ್ ಜಗದೀಶ್ ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.  ಇವರಿಬ್ಬರ ಪ್ರೀತಿಗೆ ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ತಿಳಿದುಬಂದಿದೆ. ಈ ಬಗ್ಗೆ ಪೊಲೀಸರು ಎಲ್ಲಾ ಆಯಾಮಗಳಲ್ಲಿ ತನಿಖೆ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ