Breaking News

ಸ್ನೇಹಮಯಿ ಕೃಷ್ಣ ಮತ್ತೆ ಕೋರ್ಟ್​ ಮೊರೆ

Spread the love

ಮೈಸೂರು/ಬೆಂಗಳೂರು, : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ನಿವೇಶನ ಹಂಚಿಕೆ ಹಗರಣ ಪ್ರಕರಣವನ್ನು ದೂರುದಾರ ಸ್ನೇಹಮಯಿಕೃಷ್ಣ ಸುಮ್ಮನೇ ಬಿಡುವಂತೆ ಕಾಣುತ್ತಿಲ್ಲ. ಪ್ರಕರಣವನ್ನು ಕೊನೆವರೆಗೂ ತೆಗೆದುಕೊಂಡು ಹೋಗುವ ತೀರ್ಮಾನ ಮಾಡಿದ್ದು, ಇದೀಗ ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಒತ್ತಾಯಿಸಿ ಹೈಕೋರ್ಟ್ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದಾರೆ. ಸಿಬಿಐ ತನಿಖೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್​ ವಜಾಗೊಳಿಸಿದ ಬಳಿಕ ಕೊಂಚ ರಿಲ್ಯಾಕ್ಸ್​ನಲ್ಲಿದ್ದ ಸಿಎಂ ಸಿದ್ದರಾಮಯ್ಯಗೆ ಮತ್ತೆ ಟೆನ್ಷನ್ ಶುರುವಾದಂತಾಗಿದೆ.

ಮುಡಾ ಹಗರಣ ಪ್ರಕರಣದ ತನಿಖೆಯನ್ನು ಸಿಬಿಐ ವಹಿಸಬೇಕೆಂದು ದೂರುದಾರ ಸ್ನೇಹಮಯಿ ಕೃಷ್ಣ ಅವರು ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದರು. ಆದ್ರೆ, ಕೋರ್ಟ್​ ಏಕಸದಸ್ಯ ಪೀಠ ಸ್ನೇಹಮಯಿ ಕೃಷ್ಣ ಅರ್ಜಿಯನ್ನು ವಜಾ ಮಾಡಿತ್ತು. ಇದರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನಿರಾಳರಾಗಿದ್ದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ