Breaking News

7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ

Spread the love

ಬೆಂಗಳೂರು, ಮಾರ್ಚ್​ 6: ಬೆಂಗಳೂರು (Bangalore) ಸೇರಿದಂತೆ ಕರ್ನಾಟಕದ 7 ಜಿಲ್ಲೆಗಳಲ್ಲಿ ಗುರುವಾರ ಬೆಳಗ್ಗೆ ಲೋಕಾಯುಕ್ತ ದಾಳಿ (Lokayukta Raid) ನಡೆದಿದೆ. ಬೆಂಗಳೂರು, ಕೋಲಾರ, ಕಲಬುರಗಿ, ದಾವಣಗೆರೆ, ತುಮಕೂರು, ಬಾಗಲಕೋಟೆ ಹಾಗೂ ವಿಜಯಪುರದಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. 8 ಮಂದಿ ಅಧಿಕಾರಿಗಳ ನಿವಾಸ, ಕಚೇರಿಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಬೆಂಗಳೂರಿನ DPAR ಚೀಫ್ ಇಂಜಿನಿಯರ್ ಟಿ.ಡಿ.ನಂಜುಡಪ್ಪ, ಬಿಬಿಎಂಪಿಯ ಎಕ್ಸಿಕ್ಯೂಟಿವ್​ ಇಂಜಿನಿಯರ್​ ಹೆಚ್​.ಬಿ.ಕಲ್ಲೇಶಪ್ಪ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಕೋಲಾರದಲ್ಲಿರುವ ಬೆಸ್ಕಾಂ ಎಇಇ ಜಿ.ನಾಗರಾಜ್​, ಕಲಬುರಗಿ ಲೋಕೋಪಯೋಗಿ ಚೀಫ್ ಇಂಜಿನಿಯರ್ ಜಗನ್ನಾಥ್, ದಾವಣಗೆರೆ ಫುಡ್ ಸೇಫ್ಟಿ ಅಧಿಕಾರಿ ಜಿ.ಎಸ್.ನಾಗರಾಜು, ಬಾಗಲಕೋಟೆ ಪಂಚಾಯತ್ ರಾಜ್ ಇಲಾಖೆ ಅಕೌಂಟೆಂಟ್ ಮಲ್ಲೇಶ್, ತುಮಕೂರು ಜಿಲ್ಲೆ ಶಿರಾ ತಾಲೂಕಿನ ತಾವರೆಕೆರೆ ಪಿಹೆಚ್​ಸಿ ವೈದ್ಯ ಜಗದೀಶ್ ಅವರ ಮನೆ, ಕಚೇರಿಗಳ ಮೇಲೆ ದಾಳಿ ನಡೆದಿದೆ.

ಕೋಲಾರದಲ್ಲಿ ಬೆಸ್ಕಾಂ ಎಂಜಿನಿಯರ್ ಮನೆ, ಕಚೇರಿ ಮೇಲೆ ದಾಳಿ

ಕೋಲಾರದಲ್ಲಿ ಬೆಸ್ಕಾಂ AEE ಜಿ.ನಾಗರಾಜ್ ಮನೆ ಹಾಗೂ ಅವರಿಗೆ ಸೇರಿದ ಮೂರು ಕಡೆ ದಾಳಿ ನಡೆದಿದೆ. ನಾಗರಾಜ್ ಪ್ರಸ್ತುತ ಬೆಂಗಳೂರು ರಾಜಾಜಿನಗರ AEE ಬೆಸ್ಕಾಂ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಾಗರಾಜ್ ಅವರ ನಿವಾಸ, ಕೆ.ಆರ್.ಪುರಂ ಬಳಿಯ ಪ್ರಿಯದರ್ಶಿನಿ ಬಡಾವಣೆಯಲ್ಲಿನ ಮನೆ, ರಾಜಾಜಿನಗರ ಬೆಸ್ಕಾಂ ಕಚೇರಿ, ಅವರ ಸಂಬಂಧಿಕರೊಬ್ಬರ ಮನೆ ಮೇಲೆ ದಾಳಿ ನಡೆದಿದೆ.


Spread the love

About Laxminews 24x7

Check Also

ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ

Spread the love ಚಿಕ್ಕೋಡಿ : ಪಿ ರಾಜೀವ್ ಅವರೇ ಲೋಕಾಯುಕ್ತ ತನಿಖೆ ಯಾವಾಗ? : ರಮೇಶ ಯಡವನ್ನವರ ರಾಯಬಾಗ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ