Breaking News

ಕೆಪಿಎಸ್ಸಿ ಅಕ್ರಮಕ್ಕೆ ಬ್ರೇಕ್‌ ಹಾಕಲು ಕಾಯ್ದೆ ತಿದ್ದುಪಡಿ

Spread the love

ಬೆಂಗಳೂರು, ಮಾರ್ಚ್ 6: ಕರ್ನಾಟಕ ಲೋಕಸೇವಾ ಆಯೋಗದ (KPSC) ಅವ್ಯವಹಾರ, ಭ್ರಷ್ಟಾಚಾರ ಮತ್ತು ಒಂದರ ಮೇಲೊಂದು ಎಡವಟ್ಟುಗಳಿಂದ ಪ್ರಾಮಾಣಿಕ ಅಭ್ಯರ್ಥಿಗಳು ಬೇಸತ್ತು ಹೋಗಿದ್ದಾರೆ. ವ್ಯಾಪಕ ಆಕ್ರೋಶದ ಬಳಿಕ ಎಚ್ಚೆತ್ತಿರುವ ರಾಜ್ಯಸರ್ಕಾರ (Karnataka Govt) ಇದೀಗ ಕೆಪಿಎಸ್ಸಿಗೆ ಕಾಯಕಲ್ಪ ನೀಡಲು ಮುಂದಾಗಿದೆ. ವಿಧಾನಸೌಧದಲ್ಲಿ ಬುಧವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ‘ಕೆಪಿಎಸ್ಸಿ ಕಾಯ್ದೆ 1959’ಕ್ಕೆ (KPSC Act) ತಿದ್ದುಪಡಿ ತರಲು ತೀರ್ಮಾನಿಸಿದೆ. ಈ ಅಧಿವೇಶನದಲ್ಲೇ ತಿದ್ದುಪಡಿ ಮಸೂದೆ ಮಂಡನೆಗೆ ನಿರ್ಧರಿಸಿದೆ.

ಪಿಎಸ್ಸಿ ತಿದ್ದುಪಡಿ ಕಾಯ್ದೆಯಲ್ಲೇನಿದೆ?

ಈ ತಿದ್ದುಪಡಿ ಮಸೂದೆ ಪ್ರಕಾರ ನೇಮಕಾತಿ ಸಂದರ್ಶನ ಮಂಡಳಿಯಲ್ಲಿ ಆಯೋಗ ನಿಯೋಜಿಸಬಹುದಾದ ಒಬ್ಬ ಸದಸ್ಯ ಮಾತ್ರ ಇರಲಿದ್ದಾರೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ರಾಜ್ಯ ಗೆಜೆಟೆಡ್ ಪ್ರೊಬೇಷನರ್ಸ್ ನೇಮಕಾತಿ ನಿಯಮದಲ್ಲಿ ಇರುವಂತೆ ಸಂದರ್ಶನ ನಡೆಸಬೇಕು ಎಂದು ತಿದ್ದುಪಡಿ ಮಾಡಲಾಗುತ್ತದೆ. ಪ್ರಸ್ತುತ ನಿಯಮದಲ್ಲಿ ಆಯೋಗ ನಿಯೋಜಿಸಿದ ಇಬ್ಬರು ಅಥವಾ ಹೆಚ್ಚು ಸದಸ್ಯರು ಅಭ್ಯರ್ಥಿಗಳ ಸಂದರ್ಶನ ನಡೆಸಬಹುದಾಗಿದೆ. ಈ ಸಂದರ್ಶನದ ಫಲಿತಾಂಶಗಳನ್ನು ಆಯೋಗದ ಮುಂದೆ ಮಂಡಿಸಿ, ಅಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಬೇಕು ಎಂಬ ಅಂಶ ಇದೆ. ಇದು ಸ್ವಜನ ಪಕ್ಷಪಾತ, ಅಕ್ರಮಕ್ಕೆ ಎಡೆ ಮಾಡಿ ಕೊಟ್ಟಿದೆ ಎಂಬ ಆರೋಪವಿತ್ತು. ಅದನ್ನು ಬದಲಾಯಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ತಿದ್ದುಪಡಿಯಂತೆ ಆಯೋಗದ ಸಭೆಗೆ ಅಧ್ಯಕ್ಷರನ್ನು ಸೇರಿಸಿ ಒಟ್ಟು ಸದಸ್ಯರ ಪೈಕಿ ಶೇ 50ರಷ್ಟು ಕೋರಂ ಅಗತ್ಯ ಇದೆ ಎಂದು ಬದಲಾಯಿಸಲಾಗುವುದು‌. ಈ ಹಿಂದೆ ಅಧ್ಯಕ್ಷರು ಇಲ್ಲದಿದ್ದರೂ ಶೇ 50ರಷ್ಟು ಎಂದಿತ್ತು. ಆಯೋಗದ ಎಲ್ಲ ನಿರ್ಣಯಗಳು ಎಲ್ಲ ಸದಸ್ಯರಿಗೂ ಮುಕ್ತ ಆಗಿರಬೇಕು. ಒಂದು ವೇಳೆ ಆಯೋಗದ ನಿರ್ಣಯಗಳ ಸಂಬಂಧ ಸದಸ್ಯ ಭಿನ್ನಾಭಿಪ್ರಾಯ ಹೊಂದಿದ್ದರೆ, ಅದಕ್ಕೆ ಕಾರಣದೊಂದಿಗೆ ದಾಖಲಿಸಬೇಕು.

 


Spread the love

About Laxminews 24x7

Check Also

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

Spread the loveಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ