Breaking News

ಮಚ್ಚು ಹಿಡಿದು ಅಡುಗೆ ಭಟ್ಟನನ್ನ ಅಟ್ಟಾಡಿಸಿದ ಹೊಟೇಲ್ ಮ್ಯಾನೇಜರ್

Spread the love

ಬೆಂಗಳೂರು, ಮಾರ್ಚ್​ 06: ಹೋಟೆಲ್​​ನಲ್ಲಿ ಮಚ್ಚು ಹಿಡಿದು ಅಡಿಗೆ ಭಟ್ಟನನ್ನ ಮ್ಯಾನೇಜರ್ (manager)​ ಅಟ್ಟಾಡಿಸಿ ಮಾರಣಾಂತಿಕವಾಗಿ ಹಲ್ಲೆ 

(Attack) ಮಾಡಿರುವಂತಹ ಘಟನೆ ಆರ್​​ಟಿ ನಗರದ 80 ಅಡಿ ರಸ್ತೆಯಲ್ಲಿನ ಹೋಟೆಲ್ ಒಂದರಲ್ಲಿ ನಡೆದಿದೆ. ಮಟನ್ ಕಡಿಯುವ ಮಚ್ಚಿನಿಂದ ಸಿಬ್ಬಂದಿ ಅಡುಗೆ ಭಟ್ಟನ ಗುರುಮೂರ್ತಿ ಮೇಲೆ ಮ್ಯಾನೇಜರ್ ಶಜಾದ್ ಅಲಿ ಹಲ್ಲೆ ಮಾಡಿರುವ ಆರೋಪ ಮಾಡಲಾಗಿದೆ.

ಸದ್ಯ ಘಟನೆ ಬಗ್ಗೆ ಪೊಲೀಸರು (police) ಮಾಹಿತಿ ಪಡೆದುಕೊಂಡಿದ್ದಾರೆ. ಹುಡುಗಿ ವಿಚಾರಕ್ಕೆ ಗಲಾಟೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಆರ್​​ಟಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳಕ್ಕೆ ಆರ್​ಟಿ ನಗರ ಪೊಲೀಸರು ಭೇಟಿ ನೀಡಿದ್ದಾರೆ. ಹೋಟೆಲ್ ಸಿಸಿಟಿವಿ ದೃಶ್ಯಾವಳಿ ಪರಿಶೀಲನೆ ಮಾಡಿದ್ದಾರೆ. ಮಧ್ಯಾಹ್ನ 1.30 ರ ನಡುವೆ ಘಟನೆ ನಡೆದ್ದು, ಈ ವೇಳೆ ಮಾಂಸ ಕತ್ತರಿಸುವ ಮಚ್ಚು ತಂದು ಹಲ್ಲೆ ಮಾಡಲಾಗಿದೆ. ಗಾಯಾಳು ಗುರುಮೂರ್ತಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ