Breaking News

ಶಿವಶ್ರೀ ಕೈಹಿಡಿದ ಸಂಸದ ತೇಜಸ್ವಿ

Spread the love

ಬೆಂಗಳೂರು: ಬಿಜೆಪಿ ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ ಮತ್ತು ಪ್ರಸಿದ್ಧ ಗಾಯಕಿ, ಭರತನಾಟ್ಯ ಕಲಾವಿದೆ ಶಿವಶ್ರೀ ಸ್ಕಂದ ಪ್ರಸಾದ್ ಅವರ ವಿವಾಹ ಅದ್ಧೂರಿಯಾಗಿ ಕನಕಪುರ ರಸ್ತೆಯ ಖಾಸಗಿ ರೆಸಾರ್ಟ್‌ನಲ್ಲಿ ಗುರುವಾರ ನೆರವೇರಿತು.

ಕುಟುಂಬ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ಜೋಡಿ ಸಪ್ತಪದಿ ತುಳಿಯಿತು. ಇಂದು ಬೆಳಗ್ಗೆ 10.45ರ ತುಲಾ ಲಗ್ನದಲ್ಲಿ ಶಿವಶ್ರಿ ಅವರ ಕೊರಳಿಗೆ ತೇಜಸ್ವಿ ಸೂರ್ಯ ಮಾಂಗಲ್ಯ ಧಾರಣೆ ಮಾಡುವ ಮೂಲಕ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದರು.ವಿಜೃಂಭಣೆಯ ಮದುವೆ ಸಮಾರಂಭಕ್ಕೆ ವಧು – ವರರ ಕಡೆಯ ಕುಟುಂಬದವರು, ಆಪ್ತ ಬಂಧುಗಳು, ಕೇಂದ್ರ ಸಚಿವರಾದ ಪ್ರಲ್ಹಾದ್​ ಜೋಶಿ, ನಿರ್ಮಲಾ ಸೀತಾರಾಮನ್, ವಿ.ಸೋಮಣ್ಣ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ , ಸಂಸದ ಪಿ.ಸಿ. ಮೋಹನ್, ಮಾಜಿ ಸಂಸದ ಪ್ರತಾಪ ಸಿಂಹ, ಬಸವನಗುಡಿ ಬಿಜೆಪಿ ಶಾಸಕ ರವಿಸುಬ್ರಹ್ಮಣ್ಯ, ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಸೇರಿದಂತೆ ಹಲವಾರು ರಾಜಕಾರಣಿಗಳು, ಹಿತೈಷಿಗಳು ಆಗಮಿಸಿ ಶುಭ ಕೋರಿದರು.ಮಾರ್ಚ್ 9ರಂದು ಬೆಂಗಳೂರಿನ ಅರಮನೆ ಮೈದಾನದ ಪ್ರತಿಷ್ಠಿತ ಗಾಯಿತ್ರಿ ವಿಹಾರದಲ್ಲಿ ತೇಜಸ್ವಿ ಸೂರ್ಯ ಮತ್ತು ಶಿವಶ್ರೀ ಸ್ಕಂದ ಪ್ರಸಾದ್ ಅವರ ಆರತಕ್ಷತೆ ಸಮಾರಂಭ ಏರ್ಪಾಡಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ