Breaking News

ನಟಿ ರನ್ಯಾ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಬಿಗ್ ಟ್ವಿಸ್ಟ್

Spread the love

ಸ್ಯಾಂಡಲ್ ವುಡ್ ನಟಿ ರನ್ಯಾ ರಾವ್ ಅಕ್ರಮ ಚಿನ್ನ ಸಾಗಾಣೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ರಾಜಕಾರಣಿಗಳ ಕೈವಾಡವೂ ಇದೆಯೇ ಎಂಬ ಶಂಕೆ ವ್ಯಕ್ತವಾಗಿದೆ.

ನಟಿ ರನ್ಯಾ ರಾವ್ ನಿರ್ದೇಶಕಿಯಾಗಿರುವ ಕ್ಸಿರೋಡಾ ಇಂಡಿಯಾ ಪರಿವೇಟ್ ಲಿಮಿಟೆಡ್ ಕಂಪನಿಯ ನಿರ್ದೇಶಕಿಯಾಗಿದ್ದು, ಈ ಕಂಪನಿಗೆ ಕೆಐಎಡಿಬಿಯಿಂದ 12 ಎಕರೆ ಜಮೀನು ಮಂಜೂರಾಗಿದೆ.ತುಮಕೂರು ಜಿಲ್ಲೆ ಶಿರಾ ಬಳಿಯ ಕ್ಸಿರೋಡಾ ಕಂಪನಿ ಇದ್ದು ಈ ಕಂಪನಿಗೆ ರನ್ಯಾ ರಾವ್ ಹಾಗೂ ರಷಬ್ ಇಬ್ಬರು ನಿರ್ದೇಶಕರಾಗಿದ್ದಾರೆ. 2023ರಲ್ಲಿ ಕೆಐಎಡಿಬಿಯಿಂದ ಈ ಕಂಪನಿಗೆ 12 ಎಕರೆ ಜಮೀನು ಮಜೂರಾಗಿದೆ. ಈ ಬಗ್ಗೆ ದಾಖಲೆಗಳು ಪತ್ತೆಯಾಗಿವೆ. 2022ರ ಏಪ್ರಿಲ್ ನಲ್ಲಿ ಕಂಪನಿ ಆರಂಭವಾಗಿದ್ದು, ಕಂಪನಿ ಆರಂಭವಾದ ಕೇವಲ 9 ತಿಂಗಳಿಗೆ ಸರ್ಕಾರದಿಂದ ಭೂಮಿ ಮಂಜೂರಾಗಿದೆ. ಒಟ್ಟಾರೆ ಪ್ರಕರಣದ ಹಿಂದೆ ರಾಜಕಾರಣಿಗಳ ಕೈವಾಡವಿರುವ ಶಂಕೆ ವ್ಯಕ್ತವಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ