Breaking News

ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ

Spread the love

ಧಾರವಾಡದಲ್ಲಿ ಆದಿ ಶಕ್ತಿ ಮಹಿಳಾ ಮಂಡಳದಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ, ಶಿವಲೀಲಾ ಕುಲಕರ್ಣಿಯರಿಗೆ ಸನ್ಮಾನ
ಧಾರವಾಡ: ಆದಿ ಶಕ್ತಿ ಮಹಿಳಾ ಮಂಡಳ ವತಿಯಿಂದ ಧಾರವಾಡದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಮಾಡಲಾಗಿದ್ದು, ಮಾಜಿ ಸಚಿವ ಹಾಗೂ ಹಾಲಿ ಗ್ರಾಮೀಣ ಶಾಸಕ ವಿನಯ ಕುಲಕರ್ಣಿವರ ಧರ್ಮಪತ್ನಿ ಶೀವಲೀಲಾ ಕುಲಕರ್ಣಿಯವರನ್ನು ಸನ್ಮಾನಿಸಿ ಗೌರವಿಸಲಾಯಿತು. ‌
ಧಾರವಾಡದ ಮದಿಹಾಳ ನಗರದ ಗಾಯಕವಾಡ ಕಲ್ಯಾಣ ಮಂಟಪದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಜರುಗಿದ್ದು, ಮಹಿಳಾ ಮಂಡಳದ ಪದಾಧಿಕಾರಿಗಳೆಲ್ಲರು ಧಾರವಾಡ ಗ್ರಾಮೀಣ ಶಾಸಕ ವಿನಯ ಕುಲಕರ್ಣಿಯವರ ಪತ್ನಿ ಶೀವಲೀಲಾ ಅವರನ್ನು ಸನ್ಮಾನಿಸಿದರು. ಸನ್ಮಾನ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, ಇಂದಿನ ದಿನಮಾನಗಳಲ್ಲಿ ಪುರುಷರಷ್ಟೇ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಬೆಳೆಯುತ್ತಿದ್ದಾರೆ. ಹಾಗಾಗಿ ನಾವು ಯಾವುದರಲ್ಲಿಯು ಕಡಿಮೆ ಇಲ್ಲ ಎಂಬ ಭಾವನೆಯ ಜತೆಗೆ ಧೈರ್ಯದೊಂದಿಗೆ ಮುಂದೆ ಹೆಜ್ಜೆ ಹಾಕಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಧಾರವಾಡ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೌರಮ್ಮ ಬಲೋಗಿ, ಶ್ರೀಮತಿ ಸುಶೀಲಾ ಕೊಟ್ರಶೆಟ್ಟರ್, ವೀಣಾ ಹಾಲಳ್ಳಿ, ರಾಜೇಶ್ವರಿ ಗಾಯಕ್ವಾಡ, ಪ್ರೀಯಾ ಪಾಟೀಲ್ ಸೇರಿ ಆದಿಶಕ್ತಿ ನಗರದ ಮಹಿಳಾ ಮಂಡಳದ ಸದಸ್ಯರು ಉಪಸ್ಥಿತಿದ್ದರು

Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ