Breaking News

ಕುಂಭಮೇಳ ಪ್ರವಾಸದ ಹೆಸರಿನಲ್ಲಿ 70 ಲಕ್ಷ ರೂಪಾಯಿಗಳ ವಂಚನೆ

Spread the love

ಬೆಂಗಳೂರುಮಾರ್ಚ್​ 10: ಕುಂಭಮೇಳ (Kumbh Melaಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆರಾಘವೇಂದ್ರ ರಾವ್ ಬಂಧಿತ ಆರೋಪಿ

ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆಕಾಶಿಪ್ರಯಾಗ್​ರಾಜ್ (Prayagraj), ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ 14 ದಿನದ ಪ್ರವಾಸಕ್ಕೆ ಕರೆದುಕೊಂಡು ಹೋಗುವುದಾಗಿ ಫೇಸ್​ಬುಕ್​ನಲ್ಲಿ ಜಾಹೀರಾತು ನೀಡಿದ್ದಾನೆ.

ಇದನ್ನು ನಂಬಿದ ಯಾತ್ರಾರ್ಥಿಗಳು ರಾಘವೇಂದ್ರ ರಾವ್​ನನ್ನು ಸಂಪರ್ಕಿಸಿದ್ದಾರೆಆಗಆರೋಪಿ ರಾಘವೇಂದ್ರ ರಾವ್ಏಳು ದಿನಗಳ ಪ್ಯಾಕೇಜ್​ಗೆ ತಲಾ 49 ಸಾವಿರ ರೂಪಡೆದಿದ್ದಾನೆ.​ ಹೀಗೆಪ್ರವಾಸದ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ 70 ಲಕ್ಷ ರೂಪಡೆದಿದ್ದಾನೆಬಳಿಕರಾಘವೇಂದ್ರ ರಾವ್ ಎರಡು ರೀತಿ ವಂಚನೆ ಎಸಗಿದ್ದಾನೆ.

ಕೆಲವರಿಗೆ ಟಿಕೆಟ್ ಬುಕ್ ಮಾಡಿನಂತರ ರದ್ದು ಮಾಡಿದ್ದಾನೆರದ್ದು ಮಾಡಿದ ಬಳಿಕ ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಜಮೆ ಮಾಡಿಕೊಂಡಿದ್ದಾನೆ.ಇನ್ನು ಕೆಲವರಿಗೆಪ್ರಯಾಗ್ ರಾಜ್​ಗೆ ಯಾತ್ರಿಕರು ತಲುಪಿದ ನಂತರ ಅವರ ರಿಟರ್ನ್ ಟಿಕೆಟ್ ರದ್ದು ಮಾಡಿದ್ದಾನೆ

ವಾಪಸ್​ ಆದ ಹಣವನ್ನು ತನ್ನ ಖಾತೆಗೆ ಹಾಕಿಸಿಕೊಂಡಿದ್ದಾನೆಟಿಕೆಟ್ ರದ್ದಾದ ಬಳಿಕ ರಾಘವೇಂದ್ರ ರಾವ್​ ಮೊಬೈಲ್ ಸ್ವಿಚ್​ ಆಫ್ ಮಾಡಿದ್ದಾನೆಈ ಬಗ್ಗೆ ಗೋವಿಂದರಾಜನಗರ ಪೊಲೀಸ್​ ಠಾಣೆಯಲ್ಲಿ 20 ಕ್ಕೂ ಹೆಚ್ಚು ಜನರು ದೂರು‌ ನೀಡಿದ್ದಾರೆಪ್ರಕರಣ ದಾಖಲಿಸಿಕೊಂಡು ಪೊಲೀಸರು ರಾಘವೇಂದ್ರ ರಾವ್​ನನ್ನು ಬಂಧಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ