Breaking News

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್

Spread the love

ರಂಗಪಂಚಮಿ ವೇಳೆ ಅಶಾಂತಿ ಮೂಡಿಸಲು ಯತ್ನಿಸಿದರೇ ಹುಷಾರ್: ಕಮಿಷನರ್
ರಂಗಪಂಚಮಿ ಹಬ್ಬದ ಹಿನ್ನೆಲೆಯಲ್ಲಿ ಇಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಹುಬ್ಬಳ್ಳಿಯಲ್ಲಿ ಕಾಮದೇವರನ್ನು ಪ್ರತಿಸ್ಥಾಪನೆ ಮಾಡುವ ಸ್ಥಳಗಳಿಗೆ ಭೇಟಿ ನೀಡಿ ಶಾಂತಿಯುತ ಹಬ್ಬ ಆಚರಣೆಗೆ ಕರೆ ಕೊಟ್ಟರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹು-ಧಾ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಈ ಬಾರಿ ಹೋಳಿಹಬ್ಬವನ್ನು ಧಾರವಾಡದಲ್ಲಿ ಮಾರ್ಚ್ 15, ಹುಬ್ಬಳ್ಳಿಯಲ್ಲಿ 18 ನೇ ತಾರೀಖು ಆಚರಣೆ ಮಾಡಲಾಗುತ್ತಿದೆ. ಇದಕ್ಕಾಗಿ ಹೊರ ಜಿಲ್ಲೆಗಳಿಂದ 2500 ಕ್ಕೂ ಹೆಚ್ಚು ಸಿಬ್ಬಂದಿಗಳನ್ನು ಕರೆಸಲಾಗುತ್ತಿದೆ ಎಂದರು.
ಹುಬ್ಬಳ್ಳಿ-ಧಾರವಾಡದಲ್ಲಿ ರಾಜ್ಯವೇ ಮೆಚ್ಚುವ ಹಾಗೇ ಸಾಂಪ್ರದಾಯಿಕವಾಗಿ ಹೋಳಿ ಆಚರಣೆ ಮಾಡಲಾಗುತ್ತದೆ. ಹೀಗಾಗಿ ಬೇರೆ ಜಿಲ್ಲೆ,
ಹೊರ ರಾಜ್ಯಗಳಿಂದ ಜನರು ಆಗಮಿಸುತ್ತಾರೆ. 400 ಕ್ಕೂ ಹೆಚ್ಚು ಪ್ರತ್ಯೇಕ ಸ್ಥಳದಲ್ಲಿ ಕಾಮದೇವರ ಸ್ಥಾಪನೆ ಆಗಲಿದೆ. ಒಂದು ಲಕ್ಷಕ್ಕೂ ಹೆಚ್ಚು ಜನರು ಸೇರುವ ನಿರೀಕ್ಷೆಯಿದೆ. ಈ ವೇಳೆ ಯಾವುದೇ ಅಹಿತಕರ ಘಟನೆಗಳು ಸಂಬಂಧಿಸಿದಂತೆ ಸಿದ್ದತೆ ಮಾಡಲಾಗಿದೆ ಎಂದು ತಿಳಿಸಿದರು.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ