Breaking News

ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ,

Spread the love

ಬೆಂಗಳೂರು: ಕಟ್ಟಡ ಕಾರ್ಮಿಕರು ಕೆಲಸ ಮಾಡುವ ಸ್ಥಳಕ್ಕೇ ಹೋಗಿ ಆರೋಗ್ಯ ತಪಾಸಣೆ, ಚಿಕಿತ್ಸೆ ಕೊಡುವ 135 ಸಂಚಾರಿ ಆಸ್ಪತ್ರೆಗಳನ್ನು ಸಿಎಂ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಿದರು.

ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗಾಗಿ ಮಾತ್ರ ಸಜ್ಜುಗೊಳಿಸಿರುವ 135 “ಸಂಚಾರಿ ಆರೋಗ್ಯ ಘಟಕ” ಆ್ಯಂಬುಲೆನ್ಸ್ ವಾಹನಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ, ಬಸವಣ್ಣನವರ ಕಾಯಕ – ದಾಸೋಹ ಪರಿಕಲ್ಪನೆಯಲ್ಲಿ ನಾವು ಕಾರ್ಯಕ್ರಮ ರೂಪಿಸುತ್ತಿದ್ದೇವೆ‌ ಎಂದು ತಿಳಿಸಿದರು.

ಸಮಾಜದಲ್ಲಿ ದುಡಿಯುವ ವರ್ಗ ಒಂದು ಕಡೆ ಇದ್ದರೆ, ದುಡಿಸಿಕೊಳ್ಳುವ ವರ್ಗ ಮತ್ತೊಂದು ಕಡೆ ಇರುತ್ತದೆ. ಯಾರು ಉತ್ಪಾದನಾ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೋ ಅವರೇ ದೇಶ ನಿರ್ಮಾತೃಗಳು. ಇಡೀ ದೇಶ ಕಾರ್ಮಿಕರ ಶ್ರಮವನ್ನು ಅವಲಂಬಿಸಿದೆ‌. ಸಮಾಜದಲ್ಲಿ ಒಂದೇ ವರ್ಗದವರು ದುಡಿಯುತ್ತಿರಬಾರದು, ಎಲ್ಲಾ ವರ್ಗದವರೂ ದುಡಿಯಬೇಕು. ಆಗ ಮಾತ್ರ ಬುದ್ದ, ಬಸವ, ಅಂಬೇಡ್ಕರ್ ಆಶಯದ ಸಮ ಸಮಾಜ ನಿರ್ಮಾಣ ಸಾಧ್ಯ ಎಂದರು.ಸಚಿವ ಸಂತೋಷ್ ಲಾಡ್ ಅವರ ಕಾಳಜಿ ಮತ್ತು ಕರ್ತವ್ಯ ಪ್ರಜ್ಞೆಯಿಂದಾಗಿ ಉಚಿತ ಸಂಚಾರಿ ಆಸ್ಪತ್ರೆಗಳನ್ನು ಜಾರಿಗೊಳಿಸಲಾಗಿದೆ. ಕಾರ್ಮಿಕರ ಸೆಸ್ ಹಣದಿಂದ ಕಾರ್ಮಿಕ ಕಲ್ಯಾಣ ಮಂಡಳಿ ಸುಸಜ್ಜಿತ ಸಂಚಾರಿ ಆಸ್ಪತ್ರೆಗಳನ್ನು ಲೋಕಾರ್ಪಣೆಗೊಳಿಸಲಾಗಿದೆ. ಕಟ್ಟಡ ಮತ್ತು ಇತರ ಕಾರ್ಮಿಕರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು ಎನ್ನುವ ಕಾರಣದಿಂದ ಸರ್ಕಾರ ಕಾರ್ಮಿಕರ ಮಕ್ಕಳಿಗಾಗಿ ಉಚಿತ ಊಟ ಮತ್ತು ವಸತಿ ಶಾಲೆಗಳನ್ನು ತೆರೆಯಲಿದೆ ಎಂದು ಘೋಷಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ