Breaking News

ಬೆಂಗಳೂರಿನಲ್ಲಿ ಕೆಲ ದಿನಗಳಿಂದ ಕಡಿಮೆ ಆಗಿದ್ದ ಕಸ(garbage) ವಿಲೇವಾರಿ ಸಮಸ್ಯೆ ಮತ್ತೆ ತೀವ್ರಗೊಂಡಿದೆ.

Spread the love

ಬೆಂಗಳೂರು, (ಮಾರ್ಚ್​ 13): ಬೆಂಗಳೂರಿನಲ್ಲಿ (Bengaluru) ಕೆಲ ದಿನಗಳಿಂದ ಕಡಿಮೆ ಆಗಿದ್ದ ಕಸ(garbage) ವಿಲೇವಾರಿ ಸಮಸ್ಯೆ ಮತ್ತೆ ತೀವ್ರಗೊಂಡಿದೆ. ಕಣ್ಣೂರು ಬಳಿಯ ಮಿಟ್ಟಗಾನ ಹಳ್ಳಿ ಡಂಪಿಂಗ್ ಯಾರ್ಡ್ ನಲ್ಲಿ (mittaganahalli dumping yard) ಕಸ ಹಾಕುವುದನ್ನೇ ನಿಲ್ಲಿಸಲಾಗಿದೆ.

ಈ ಹಿನ್ನೆಲೆಯಲ್ಲಿ ನಗರದಲ್ಲಿ ಕಸ ತಾಂಡವವಾಡುತ್ತಿದೆ. ಇನ್ನು ಬಿಬಿಎಂಪಿ ವಾಹನಗಳು ಸಹ ಕಸ ತುಂಬಿಕೊಂಡು ನಿಂತಲ್ಲೇ ನಿಂತಿವೆ. ಈ ಬೆಳವಣಿಗೆ ಬೆನ್ನಲ್ಲೇ ಕಸಕ್ಕೆ ತೆರಿಗೆ ವಿಧಿಸಲು ಮುಂದಾಗಿರುವ ಸರ್ಕಾರದ ನಡೆಗೆ ಆಕ್ರೋಶ ಭುಗಿಲೆದ್ದಿದೆ.ಕಣ್ಣೂರು ಬಳಿಯ ಮಿಟ್ಟಗನ ಹಳ್ಳಿಯಲ್ಲಿ ಕಸದ ಡಂಪಿಂಗ್ ಹೆಚ್ಚಾಗಿದ್ದು, ಮಾಲಿನ್ಯ ಮಿತಿಮೀರಿದೆ.

ಗರಿಷ್ಠ ಹಂತ ತಲುಪಿ ವಾತಾವರಣ ಹದಗೆಟ್ಟಿದ್ದರೂ ಪಾಲಿಕೆ ಮಾತ್ರ ಇನ್ನೂ ಕಸ ಸುರಿಯುವುದನ್ನ ಮುಂದುವರೆಸಿದೆ. ಹೀಗಾಗಿ ಕಣ್ಣೂರು, ಮಿಟ್ಟಗಾನಹಳ್ಳಿ ಕಲ್ಲು ಕ್ವಾರಿಯಲ್ಲಿ ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ ಕಸ ಸುರಿಯುವುದನ್ನು ವಿರೋಧಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇದರಿಂದ 400ಕ್ಕೂ ಹೆಚ್ಚು ಕಸ ವಿಲೇವಾರಿ ಲಾರಿಗಳು ಸಾಲುಗಟ್ಟಿ ನಿಂತಿವೆ. ಈ ಬೆಳವಣಿಗೆಯಿಂದ ಬೆಂಗಳೂರು ನಗರದಲ್ಲಿ ಕಸದ ಸಮಸ್ಯೆ ಮತ್ತೆ ಉಲ್ಬಣಗೊಂಡಿದೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ