Breaking News

ವಿಧಾನಸಭೆಯಲ್ಲಿ ಸದ್ದು ಮಾಡಿದ ಬೀದಿನಾಯಿಗಳ ಕಾಟದ ವಿಚಾರ; ಗಮನ ಸೆಳೆದ ನಾಗರಹಾವು ಪ್ರಸ್ತಾಪ

Spread the love

ಬೆಂಗಳೂರು : ರಾಜಧಾನಿ ಬೆಂಗಳೂರು ನಗರದಲ್ಲಿ ಬೀದಿ ನಾಯಿಗಳಿಂದಾಗುತ್ತಿರುವ ತೊಂದರೆಯ ವಿಚಾರ ವಿಧಾನಸಭೆಯಲ್ಲಿ ಇಂದು ಪ್ರತಿಧ್ವನಿಸಿ ಸದಸ್ಯರ ನಡುವೆ ಸ್ವಾರಸ್ಯಕರ ಚರ್ಚೆ ನಡೆಯಿತು.

ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪಿಸಿದ ಬಿಜೆಪಿ ಶಾಸಕ: ಇಂದು ಶೂನ್ಯವೇಳೆಯಲ್ಲಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ವಿಷಯ ಪ್ರಸ್ತಾಪಿಸಿ, ಬೀದಿನಾಯಿಗಳ ಹಾವಳಿಯಿಂದ ತೊಂದರೆಯಾಗುತ್ತಿದೆ. ಸನ್ಸಿಟಿ ಅಪಾರ್ಟ್​ಮೆಂಟ್ 18ನೇ ಮಹಡಿಗೆ ಬೀದಿನಾಯಿಗಳನ್ನು ಮಹಿಳೆಯೊಬ್ಬರು ಕರೆದೊಯ್ದಿದ್ದಾರೆ. ಇದರಿಂದ ತೊಂದರೆಯಾಗುತ್ತಿದೆ. ಅಲ್ಲಿನ ನಿವಾಸಿಗಳಿಗೆ ಆ ಬೀದಿ ನಾಯಿಗಳು ಕಚ್ಚಿವೆ. ಬಿಬಿಎಂಪಿ ಗಮನಕ್ಕೆ ತಂದರೂ ಯಾವುದೇ ಕ್ರಮವಾಗಿಲ್ಲ. ಆ ನಾಯಿಗಳು ಅಪಾರ್ಟ್​ಮೆಂಟ್​ನಿಂದ ಹೊರಹೋಗಬೇಕು. ಬೀದಿನಾಯಿಗಳ ನಿರ್ವಹಣೆಗೆ 5 ಕೋಟಿ ರೂ. ಬಜೆಟ್ ಇರುತ್ತದೆ. ಈ ಸಂಬಂಧ ಪೊಲೀಸ್ ಇಲಾಖೆ ಹಾಗೂ ಬಿಬಿಎಂಪಿಗೆ ಸ್ಪಷ್ಟ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ವಿಧಾನಸೌಧದ ಸುತ್ತವೇ ಇವೆಯಂತೆ 1500 ಬೀದಿ ನಾಯಿಗಳು: ಮಧ್ಯ ಪ್ರವೇಶಿಸಿ ಮಾತನಾಡಿದ ಪ್ರತಿಪಕ್ಷದ ನಾಯಕ ಆರ್.ಅಶೋಕ್, ವಿಧಾನಸಭೆಯ ಸುತ್ತಮುತ್ತ 1500 ನಾಯಿಗಳಿರುವ ಬಗ್ಗೆ ಸಭಾಧ್ಯಕ್ಷರು ಸಭೆ ನಡೆಸಿದ್ದಾರೆ. ಬೀದಿ ನಾಯಿಗಳೆಲ್ಲಾ ಬೀದಿಯಲ್ಲೇ ಇರಲಿ, ಅಪಾರ್ಟ್​ಮೆಂಟ್​ಗೆ ಬರುವುದು ಬೇಡ ಎಂದರು.ಈ ಬಗ್ಗೆ ಸಿಎಸ್​ ಜತೆ ಮಾತನಾಡಿದ್ದೇನೆ ಎಂದ ಸ್ಪೀಕರ್​: ಸ್ಪೀಕರ್ ಯು.ಟಿ.ಖಾದರ್ ಮಾತನಾಡಿ, ಬೀದಿ ನಾಯಿಗಳಿಗೆ ಗೌರವಪೂರ್ವಕ ಬದುಕು ಕೊಡಬೇಕೆಂಬ ಉದ್ದೇಶದಿಂದ ಮುಖ್ಯ ಕಾರ್ಯದರ್ಶಿ ಸೇರಿದಂತೆ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ಮಾಡಿದ್ದೇವೆ ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ