Breaking News

ಜಲಜೀವನ್​​​ ಮಿಷನ್​​​ ಯೋಜನೆ ಅನುಷ್ಠಾನದಲ್ಲಿನ ತಪ್ಪುಗಳ ಬಗ್ಗೆ ತನಿಖೆ ?

Spread the love

ಬೆಂಗಳೂರು: ತುಮಕೂರು ಜಿಲ್ಲೆಯ ಜಲಜೀವನ್​​ ಮಿಷನ್​​ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂವರು ಅಧಿಕಾರಗಳನ್ನು ಒಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದರು.

ಇಂದು ಕಾಂಗ್ರೆಸ್​​ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್​​ ಖರ್ಗೆ ಅವರ ಪರವಾಗಿ ಉತ್ತರ ನೀಡಿದ ಸಚಿವರು, ತನಿಖಾ ತಂಡವು ತುಮಕೂರಿಗೆ ಭೇಟಿ ನೀಡಿ 571 ಕಾಮಗಾರಿಗಳನ್ನು ಆಯ್ಕೆ ಮಾಡಿ, 183 ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದೆ.

25 ಅನರ್ಹ ಗುತ್ತಿಗೆದಾರರಿಗೆ 69 ಕಾಮಗಾರಿಗಳ ಟೆಂಡರ್​​​ ನೀಡಿ, ಕಾರ್ಯಪಾಲಕ ಇಂಜಿನಿಯರ್​​ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಮಧ್ಯಂತರ ವರದಿ ನೀಡಿದೆ. ಕರ್ತವ್ಯಲೋಪ ಎಸಗಿದ ಕಾರ್ಯಪಾಲಕ ಇಂಜಿನಿಯರ್​ (ನಿವೃತ್ತ) ಎಸ್​. ರವೀಶ್​ ಅವರ ವಿರುದ್ಧ ಇಲಾಖಾ ವಿಚಾರಣೆ ಕೈಗೊಳ್ಳಲು ಮತ್ತು ದೋಷಾರೋಪಪಟ್ಟಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ.

ತನಿಖೆ ಅರ್ಧ ನಡೆಯುವುದರಿಂದ ಲೋಕಾಯುಕ್ತ ತನಿಖೆಗೆ ವಹಿಸಿದರೆ ವಿಳಂಬವಾಗುವುದು. ಇದೇ ತನಿಖಾ ತಂಡವನ್ನು ಮುಂದುವರಿಸುವ ಮತ್ತು ಎಲ್​​ ಓಎ ಕೊಟ್ಟಿರುವ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವರು, ಸಂಬಂಧಪಟ್ಟ ಶಾಸಕರೊಂದಿಗೆ ಚರ್ಚಿಸಲು ತಿಳಿಸಲಾಗುವುದು ಎಂದರು. ಈ ಹಂತದಲ್ಲಿ ಮಧ್ಯಪ್ರವೇಶಿಸಿದ ಶಾಸಕ ಜಿ.ಟಿ. ಪಾಟೀಲ್ ಅವರು, ಈ ಸಂಬಂಧ ಅಂದಾಜು ಸಮಿತಿಯಲ್ಲಿ ಚರ್ಚೆಯಾಗಿದೆ. ಲೋಕಾಯುಕ್ತ ತನಿಖೆಯಾಗಬೇಕೆಂದು ಆಗ್ರಹಿಸಿದರು.

ಬಿಜೆಪಿ ಶಾಸಕ ಸಿದ್ದು ಸವದಿ ಮಾತನಾಡಿ, ರಾಜ್ಯದಲ್ಲಿ ಜಲಜೀವನ್ ಮಿಷನ್ ಯೋಜನೆ ಕಳಪೆಯಿಂದ ಕೂಡಿದ್ದು, ತನಿಖೆ ಆಗಬೇಕೆಂದು ಒತ್ತಾಯಿಸಿದರು. ಇದಕ್ಕೂ ಮುನ್ನ ಮಾತನಾಡಿದ ಟಿ.ಬಿ. ಜಯಚಂದ್ರ ಅವರು, “ಜಲಜೀವನ್​ ಮಿಷನ್​ ಯೋಜನೆಯ 2,528 ಕಾಮಗಾರಿಗಳಲ್ಲಿ ಅವ್ಯವಹಾರವಾಗಿದೆ. ರಸ್ತೆ ಕಾಮಗಾರಿ ಆಗುತ್ತಿಲ್ಲ. ಸಂಬಂಧಪಟ್ಟ ಅಧಿಕಾರಿ ನಿವೃತ್ತರಾಗಿದ್ದಾರೆ. ಭ್ರಷ್ಟ ಅಧಿಕಾರಿಗಳನ್ನು ರಕ್ಷಿಸುತ್ತಿರುವವರಿಗೆ ತಕ್ಕ ಶಾಸ್ತಿಯಾಗಲು ಲೋಕಾಯುಕ್ತ ತನಿಖೆಗೆ ವಹಿಸಬೇಕು” ಎಂದು ಆಗ್ರಹಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ