Breaking News

ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿ ನೀಡಲು ಸರ್ಕಾರ ನಿರ್ಧಾರ ಮಾಡಿದೆ.

Spread the love

ಬೆಂಗಳೂರು : “ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,‌ ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ,‌ ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ತಿಳಿಸಿದರು.

ಕೆಪಿಸಿಸಿ ಕಚೇರಿ ಬಳಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮಾಡಿರುವ ತೀರ್ಮಾನದ ಕುರಿತು ಪ್ರತಿಕ್ರಿಯಿಸಿ, “ಕೇವಲ ಎರಡು ಕೋಟಿ ಮೊತ್ತಕ್ಕೆ ಮಾತ್ರ ಒಪ್ಪಿಗೆ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ‌‌ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ನಾವು ಬೇರೆ ಯಾರ ಹಕ್ಕನ್ನು ಇಲ್ಲಿ ಕಸಿದುಕೊಳ್ಳುತ್ತಿಲ್ಲ‌. ಅವರಿಗೂ ನಾವು ಬದುಕು ಕೊಡಬೇಕಲ್ಲವೇ?” ಎಂದರು.

ಬಿಜೆಪಿಯು ಗುತ್ತಿಗೆ ಮೀಸಲಾತಿಯನ್ನು ಮತ ಬ್ಯಾಂಕ್ ರಾಜಕಾರಣ ಎಂದಿರುವ ಬಗ್ಗೆ ಪ್ರತಿಕ್ರಿಯಿಸಿ, “ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಾ ಇರಬೇಕು.‌ ಆಗಲೇ ನಾವು ಗಟ್ಟಿಯಾಗವುದು” ಎಂದು ತಿರುಗೇಟು ನೀಡಿದರು.


Spread the love

About Laxminews 24x7

Check Also

ಜನರ ಆರೋಗ್ಯ ಕಾಪಾಡುವ ಸರಕಾರದ ಸಂಕಲ್ಪಕ್ಕೆ ಕೈಜೋಡಿಸಿ: ಲಕ್ಷ್ಮೀ ಹೆಬ್ಬಾಳಕರ್

Spread the loveಜನರ ಆರೋಗ್ಯ ಕಾಪಾಡುವ ಸರ್ಕಾರದ ಸಂಕಲ್ಪ ಸಾಕಾರಗೊಳ್ಳಬೇಕಾದರೆ ಸಾರ್ವಜನಿಕರು ಹಾಗೂ ಸಂಘ-ಸಂಸ್ಥೆಗಳು ಕೈಜೋಡಿಸುವುದು ಅಗತ್ಯ ಎಂದು ಮಹಿಳಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ