Breaking News

ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ

Spread the love

ಬೆಂಗಳೂರು : ಗಡಿ ಜಿಲ್ಲೆ ಬೆಳಗಾವಿಯಲ್ಲಿ ತಗಾದೆ ತೆಗೆಯುತ್ತಿರುವ ಮರಾಠಿ ಸಂಘಟನೆಗಳಿಗೆ ಎಚ್ಚರಿಕೆ ನೀಡಲು ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್​ಗೆ ಬೆಂಗಳೂರಿನಲ್ಲಿ ಆರಂಭದಲ್ಲೇ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬೆಳಗ್ಗೆಯಿಂದಲೇ ಸಾರ್ವಜನಿಕರ ಸಂಚಾರ ಎಂದಿನಂತಿದ್ದು, ಆಟೋ, ಬಸ್​ಗಳು ರಸ್ತೆಗಿಳಿದಿವೆ. ಬಂದ್​ ಯಶಸ್ಸಿಗಾಗಿ ಸಾರ್ವಜನಿಕರು ಹಾಗೂ ವ್ಯಾಪಾರಿಗಳ ಬಳಿ ಕನ್ನಡ ಪರ ಸಂಘಟನೆಗಳು ಮನವಿ ಮಾಡಿದ್ದವು. ಆದರೆ ಬಹುತೇಕ ಸಂಘಟನೆಗಳಿಂದ ನೈತಿಕ ಬೆಂಬಲವಷ್ಟೇ ದೊರೆತಿರುವುದರಿಂದ ಎಂದಿನಂತೆಯೇ ಸಾರ್ವಜನಿಕರು, ಸಾರಿಗೆ ವಾಹನಗಳ ಸಂಚಾರ ಆರಂಭವಾಗಿದೆ. 9 ಗಂಟೆ ಬಳಿಕ ಬಂದ್​ನ ತೀವ್ರತೆ ಹೆಚ್ಚಾದರೆ ಪರಿಸ್ಥಿತಿ ಬದಲಾಗುವ ಸಾಧ್ಯತೆಯಿದೆ.

ಬಂದ್​ಗೆ ಬೆಂಬಲ ನೀಡದವರಿಗೆ ಗುಲಾಬಿ ಹೂ ವಿತರಣೆ : ಬಂದ್​ಗೆ ಬೆಂಬಲ ನೀಡುವುದಿಲ್ಲ ಎಂದಿರುವ ಕರ್ನಾಟಕ ಸಂಘಟನೆಗಳ ಸಮಿತಿ ಮತ್ತು ಕರುನಾಡ ಕಾರ್ಮಿಕರ ಸೇನೆ ಸದಸ್ಯರು, ಎಂದಿನಂತೆ ಸಂಚರಿಸುವ ವಾಹನ ಸವಾರರಿಗೆ ಗುಲಾಬಿ ಹೂವು ನೀಡುವ ಮೂಲಕ ನಿರ್ಧಾರವನ್ನು ಸ್ವಾಗತಿಸಿದ್ದಾರೆ. ಎಂದಿನಂತೆ ದೈನಂದಿನ ಕೆಲಸ ಕಾರ್ಯಗಳತ್ತ ಮುಖಮಾಡಿರುವ ಸಾರ್ವಜನಿಕರಿಗೆ ಮೈಸೂರು ಬ್ಯಾಂಕ್​​ ಸರ್ಕಲ್​​ ಬಳಿ ಗುಲಾಬಿ ಹೂವು ವಿತರಿಸಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗುವ ಬಂದ್​ಗೆ ಬೆಂಬಲವಿಲ್ಲ : “ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳಿಗೆ ತೊಂದರೆಯಾಗುವಂಥಹ ಬಂದ್ ನಮಗೆ ಬೇಡ. ಬೆಳಗಾವಿಯಲ್ಲಿ ನಡೆದಿರುವ ಘಟನೆಗೆ ಬೆಳಗಾವಿಯಲ್ಲೇ ಹೋರಾಟ ಮಾಡಲು ಸಿದ್ಧರಿದ್ದೇವೆ ಅಥವಾ ವಿಧಾನಸೌಧ‌ ಚಲೋ, ಮಂತ್ರಿಗಳ ಮನೆ ಮುತ್ತಿಗೆ ಬೇಕಿದ್ದರೆ ಮಾಡೋಣ. ಅದನ್ನು ಬಿಟ್ಟು ಸಾರ್ವಜನಿಕರು, ವ್ಯಾಪಾರಿಗಳಿಗೆ ತೊಂದರೆಯಾಗುವಂಥಹ ಬಂದ್​ಗೆ ನಮ್ಮ ಬೆಂಬಲವಿಲ್ಲ‌” ಎಂದು ಕರ್ನಾಟಕ ಸಂಘಟನೆಗಳ ಸಮಿತಿ ಮತ್ತು ಕರುನಾಡ ಕಾರ್ಮಿಕರ ಸೇನೆಯ ಮುಖಂಡ ಬೆಟ್ಟಸ್ವಾಮಿ ಗೌಡ ಹೇಳಿದ್ದಾರೆ.


Spread the love

About Laxminews 24x7

Check Also

ಮಿರಜ್‌ನಲ್ಲಿ 1 ಕೋಟಿ ರೂಪಾಯಿ ಮೌಲ್ಯದ ನಕಲಿ ನೋಟುಗಳ ಜಪ್ತಿ

Spread the love ಚಿಕ್ಕೋಡಿ:ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ