Breaking News

ಹನಿಟ್ರ್ಯಾಪ್ ವಿರುದ್ಧ ಸಮರಕ್ಕೆ ರಾಜಣ್ಣ ಸಿದ್ಧ

Spread the love

ಬೆಂಗಳೂರು, (ಮಾರ್ಚ್ 23): ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಸಚಿವ ರಾಜಣ್ಣ (KN Rajanna)  ವಿರುದ್ಧದ ಹನಿಟ್ರ್ಯಾಪ್​ಗೆ (honeytrap Case)ಯತ್ನಿಸಿದ ಕೇಸ್​ಗೆ ಟ್ವಿಸ್ಟ್ ಸಿಕ್ಕಿದೆ.

ಸಚಿವ ರಾಜಣ್ಣ ಪುತ್ರ ಪರಿಷತ್ ಸದಸ್ಯ ರಾಜೇಂದ್ರ ಸಿಎಂ ಸಿದ್ದರಾಮಯ್ಯರನ್ನ ಭೇಟಿಯಾಗಿ ದಾಖಲೆ ಸಮೇತ ಹನಿಟ್ರ್ಯಾಪ್ ಪ್ರಕರಣದ ಮಾಹಿತಿ ನೀಡಿದ್ದಾರೆ.

ಅಷ್ಟೇ ಅಲ್ಲ ಮುಂದಿನ ವಾರ ಅಧಿಕೃತ ದೂರು ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ. ಈ ಸಂಬಂಧ ಈಗಾಗಲೇ ಹನಿಟ್ರ್ಯಾಪ್ ಪ್ರಕರಣ ಸಂಬಂಧ ನ್ಯಾಯಾಂಗ ಹೋರಾಟ ನಡೆಸಲು ಸಚಿವ ಕೆ.ಎನ್. ರಾಜಣ್ಣ ಕಾನೂನು ತಜ್ಞರ ಸಲಹೆ ಪಡೆದಿದ್ದು, ಐಟಿ ಕಾಯ್ದೆ ಹಾಗೂ ಐಪಿಸಿ ಕಾಯ್ದೆಗಳಡಿ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

ಕಾನೂನು ಏನು ಹೇಳುತ್ತೆ?

ಇನ್ನು ಈ ಹನಿಟ್ರ್ಯಾಪ್​ ಬಗ್ಗೆ ಕಾನೂನು ಏನು ಹೇಳುತ್ತೆ ಎನ್ನುವುದನ್ನು ನೋಡುವುದಾದರೆ, IPC ಸೆಕ್ಷನ್ 384 ರ ಅಡಿ 3 ವರ್ಷ ಜೈಲು ಅಥವಾ ದಂಡ. IPC ಸೆಕ್ಷನ್ 385/389 ಗಂಭೀರ ಬೆದರಿಕೆಯಾಗಿದ್ದು 10 ವರ್ಷದವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ. IPC ಸೆಕ್ಷನ್ 120(B) ಸಂಚು ಅಪರಾಧ, IPC ಸೆಕ್ಷನ್ 506 ಕ್ರಿಮಿನಲ್ ಬೆದರಿಕೆಯಾಗಿದ್ದು 2 ರಿಂದ 7 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.ದೇಶಾದ್ಯಂತ ಸದ್ದು ಮಾಡಿರುವ ಹನಿಟ್ರಾಪ್‌ ವಿಚಾರದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ರಾಜ್ಯ ನಾಯಕರಿಂದ ಮಾಹಿತಿ ಪಡೆದಿದೆ. ಸಹಕಾರ ಸಚಿವ ರಾಜಣ್ಣ ಹನಿಟ್ರ್ಯಾಪ್‌ ವಿಚಾರ ಸದನದಲ್ಲಿ ಚರ್ಚೆಯಾಗಿರುವ ಕುರಿತು ಹೈಕಮಾಂಡ್ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಶುಕ್ರವಾರ ಕರೆ ಮಾಡಿ ನಡೆದಿರುವ ಘಟನೆಗಳ ಬಗ್ಗೆ ಮಾಹಿತಿ ಪಡೆದ್ದಾರೆ. ಜತೆಗೆ, ಇಂತಹ ಗಂಭೀರ ವಿಚಾರ ಸದನದಲ್ಲಿ ಚರ್ಚೆ ಬದಲಾಗಿ ಕಾಂಗ್ರೆಸ್‌ ಪಕ್ಷದ ವೇದಿಕೆಯಲ್ಲಿ ಚರ್ಚಿಸಬಹುದಿತ್ತಲ್ಲ ಎಂದು ಉಭಯ ನಾಯಕರಿಗೂ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ