ಬೆಳಗಾವಿ : ಬೃಹತ್ ಆರೋಗ್ಯ ಮೇಳದಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಆಸ್ಪತ್ರೆ, ಖಾಸಗಿ ಆಸ್ಪತ್ರೆಗಳು ಭಾಗವಹಿಸಿವೆ. ರಾಜ್ಯದ ವಿವಿಧೆಡೆಯಿಂದ ಚಿಕಿತ್ಸೆ ಮಳಿಗೆಗಳನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಶಿಕ್ಷಣ, ಆರೋಗ್ಯ ಕ್ಷೇತ್ರಕ್ಕೆ ಸರ್ಕಾರ ಹೆಚ್ಚು ಒತ್ತು ನೀಡುತ್ತಿದೆ. ಜನರಿಗೆ ಖಾಸಗಿ ಆಸ್ಪತ್ರೆಗಳ ಮಾದರಿಯಲ್ಲಿ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆರೋಗ್ಯ ಮೇಳ ಆಯೋಜನೆ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.
ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ವಿಜ್ಞಾನ ಸಂಸ್ಥೆ ಬೆಳಗಾವಿ, ವಿವಿಧ ಸಂಘ ಸಂಸ್ಥೆಗಳು, ವಿವಿಧ ಆಸ್ಪತ್ರೆಗಳು ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸವದತ್ತಿ ತಾಲೂಕು ಕ್ರೀಡಾಂಗಣದಲ್ಲಿ ನಡೆದ ಬೃಹತ್ ಆರೋಗ್ಯ ಮೇಳ-2025ರ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯಲ್ಲಿ ಇಂತಹ ಆರೋಗ್ಯ ಮೇಳ ಈ ಹಿಂದೆ ಆಯೋಜನೆ ಮಾಡಿರಲಿಲ್ಲ. ಸವದತ್ತಿ ಭಾಗದ ಜನರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಮೇಳ ಹಮ್ಮಿಕೊಳ್ಳಲಾಗಿದೆ. ನಮ್ಮ ನಿರೀಕ್ಷೆಗಿಂತಲೂ ಹೆಚ್ಚು ಜನರು ಮೇಳದಲ್ಲಿ ಪಾಲ್ಗೊಂಡಿದ್ದಾರೆ ಎಂದು ಹೇಳಿದರು.
ಸವದತ್ತಿಯಲ್ಲಿ ಬಹಳ ಯಶಸ್ವಿಯಾಗಿ ಆರೋಗ್ಯ ಮೇಳ ನಡೆಯುತ್ತಿದೆ. ತಮ್ಮ ಆರೋಗ್ಯದ ಸಮಸ್ಯೆಗೆ ಚಿಕಿತ್ಸೆ ಪಡೆದುಕೊಳ್ಳಲು ಬಹಳಷ್ಟು ದೂರದಿಂದ ಸಾರ್ವಜನಿಕರು ಆಗಮಿಸುತ್ತಿದ್ದಾರೆ. ಅಧಿಕಾರಿಗಳ ಪರಿಶ್ರಮದಿಂದ ಆರೋಗ್ಯ ಮೇಳ ಯಶಸ್ವಿಗೊಳಿಸಿದ್ದಾರೆ. ಚಿಕಿತ್ಸೆ ಒದಗಿಸಲು ಜಿಲ್ಲೆಯ ಎಲ್ಲಾ ಸರ್ಕಾರಿ, ಖಾಸಗಿ ಆಸ್ಪತ್ರೆಗಳ ವೈದ್ಯರು ಬಂದಿದ್ದಾರೆ ಎಂದರು.
Laxmi News 24×7