Breaking News

ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನ…..

Spread the love

ಕಲಬುರಗಿ: ಹಿರಿಯ ಸಾಹಿತಿ ಗಿತಾ ನಾಗಭೂಷಣ್ (78) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಕಳೆದು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಗೀತಾ ನಾಗಭೂಷಣ್ ಅವರು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಇಂದು ನಗರದ ಖಾಸಗಿ ಆಸ್ಪತ್ರೆಯಲ್ಲಿ ಗೀತಾ ನಾಗಭೂಷಣ ನಿಧನಾರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಗೀತಾ ನಾಗಭೂಷಣ್ ಕಲಬುರಗಿಯ ಸ್ವಸ್ತಿಕ ನಗರದಲ್ಲಿ ವಾಸವಾಗಿದ್ದರು. ಶೋಷಿತರ ಪರವಾಗಿ ಬರವಣಿಗೆ ಮೂಲಕ ಗೀತಾ ನಾಗಭೂಷಣ್ ಧ್ವನಿ ಎತ್ತಿದ್ದರು. ಅದರಲ್ಲಿ ಶೋಷಿತ ಮಹಿಳೆಯರ ಪರವಾಗಿ ಧ್ವನಿ ಎತ್ತಿ ಸರ್ಕಾರದ ಕಣ್ಣತೆರಸುವ ಕೆಲಸವನ್ನು ಸಹ ಗೀತಾ ನಾಗಭೂಷಣ್ ಮಾಡುತ್ತಿದ್ದರು.

2010 ರಲ್ಲಿ ಗದಗ ನಗರದಲ್ಲಿ ನಡೆದ ಅಖಿಲ ಭಾರತ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು. ನಾಡೊಜ ಪ್ರಶಸ್ತಿ ಪಡೆದ ಮೊದಲ ಮಹಿಳಾ ಸಾಹಿತಿ ಹೆಗ್ಗಳಿಕೆ ಪಾತ್ರವಾಗಿದ್ದರು. ಗೀತಾ ನಾಗಭೂಷಣ್ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪಡೆದ ಕರ್ನಾಟಕದ ಮೊದಲ ಮಹಿಳಾ ಸಾಹಿತಿ. ಇವರ ಬದುಕು ಕಾದಂಬರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ ಅಲ್ಲದೆ ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಮೊದಲ ಮಹಿಳಾ ಸಾಹಿತಿ ಆಗಿದ್ದಾರೆ.


Spread the love

About Laxminews 24x7

Check Also

ಕೌಟುಂಬಿಕ ಕಲಹದಿಂದ ಕುಡುಗೋಲಿನಿಂದ ಪತ್ನಿಯನ್ನೇ ಕೊಚ್ಚಿ ಕೊಲೆಗೈದ ಪತಿ

Spread the love ಕಲಬುರ್ಗಿ: ಕೌಟುಂಬಿಕ ಕಲಹಕ್ಕೆ ಬೇಸತ್ತಂತ ಪತಿಯೊಬ್ಬ, ಪತ್ನಿಯನ್ನೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೈದು, ಪೊಲೀಸ್ ಠಾಣೆಗೆ ತೆರಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ