18 ಶಾಸಕರ ಅಮಾನತ್ತು ಖಂಡಿಸಿ ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ
ಬಿಜೆಪಿಯ 18 ಶಾಸಕರನ್ನು ಅಮಾನತ್ತು ಮಾಡಿರುವುದನ್ನು ಹಿಂಪಡೆಯಬೇಕು
ಹಾಗೂ ಬೆಲೆ ಏರಿಕೆಯನ್ನು ನಿಯಂತ್ರಿಸದ ರಾಜ್ಯ ಸರಕಾರದ ವಿರುದ್ಧ ಸೋಮವಾರ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ರವಾನಿಸಿದರು.
ಕರ್ನಾಟಕದ ವಿಧಾನಸಭೆಯಲ್ಲಿ ವಿಧಾನ ಸಭಾಧ್ಯಕ್ಷ ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ಮಾಡಿರುವುದು ಸಂಪೂರ್ಣವಾಗಿ ಕಾನೂನುಬಾಹಿರ ಅಸಾಂವಿಧಾನಾತ್ಮಕವಾಗಿದೆ.
ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನವಾಗಿದೆ ಎಂದು ಮನವಿಯಲ್ಲಿ ದೂರಿದ್ದಾರೆ.
Laxmi News 24×7