Breaking News

ಅತ್ತಿಗೆಯನ್ನೇ ಮಂಚಕ್ಕೆ ಕರೆದ ಮೈದುನ: ಒಪ್ಪದಿದ್ದಕ್ಕೆ ಎಲ್ಲೆಂದರಲ್ಲಿ ಕಚ್ಚಿದ ಕಾಮುಕ

Spread the love

ಧಾರವಾಡ, (ಮಾರ್ಚ್​​ 24): ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ  (Dharwad) ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ,

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ಸ್ವಂತ ಅತ್ತಿಗೆಯನ್ನ(ಅಣ್ಣನ ಹೆಂಡತಿ) ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ರಮೇಶ್, ಅತ್ತಿಗೆಯನ್ನು ಹಿಡಿದುಕೊಂಡು ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಬಳಿಕ ಮೈದುನನಿಂದ ತಪ್ಪಿಸಿಕೊಂಡು ಮನೆಯಿಂದ ಕೈಗಾಡಿಕೊಂಡು ಹೊರಗೆ ಬಂದಿದ್ದಾಳೆ. ಆಗ ಅಕ್ಕಪಕ್ಕದ ಜನರು ಏನಾಯ್ತು ಎಂದು ಓಡೋಡಿ ಬಂದಿದ್ದು, ಗಾಯಗೊಂಡಿದ್ದ ಸವಿತಾಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸದ್ಯ ಸವಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಕಾಮುಕ ಮೈದುನ ಪರಾರಿಯಾಗಿದ್ದಾನೆ.ಸವಿತಾ ತನ್ನ ಅಣ್ಣನ ಹೆಂಡತಿ ಎನ್ನುವುದನ್ನು ಮರೆತ ರಮೇಶ್, ನಿತ್ಯವೂ ಮಂಚಕ್ಕೆ ಕರೆಯುತ್ತಿದ್ದನಂತೆ. ಆದ್ರೆ, ಇದಕ್ಕೆ ಸವಿತಾ ನಿರಾಕರಿಸುತ್ತಾ ಬಂದಿದ್ದಾಳಂತೆ. ಆದ್ರೆ, ಭಾನುವಾರ ಬೆಳಗ್ಗೆ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮತ್ತೆ ಸವಿತಾಳನ್ನು ಮತ್ತೆ ಕರೆದಿದ್ದಾನೆ. ಇದಕ್ಕೆ ಸವಿತಾ ಒಪ್ಪದಿದ್ದಾಗ ಬಲವಂತ ಮಾಡಿದ್ದು, ಈ ವೇಳೆ ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಇದರಿಂದ ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿದ ಗಾಯಗಳಾಗಿದ್ದು, ಸದ್ಯ ಹುಬ್ಬಳ್ಳಿ ಕಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ