Breaking News

ಯುಗಾದಿ ಮತ್ತು ರಂಜಾನ್ ಹಬ್ಬಕ್ಕೆ ಬೆಂಗಳೂರು-ಬೆಳಗಾವಿ ನಡುವೆ ಎಕ್ಸ್​ಪ್ರೆಸ್ ರೈಲು

Spread the love

ಹುಬ್ಬಳ್ಳಿ: ಯುಗಾದಿ ಮತ್ತು ರಂಜಾನ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ರೈಲ್ವೆ ಮಂಡಳಿಯು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಬೆಳಗಾವಿ ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳ ಕಾರ್ಯಾಚರಣೆಗೆ ಅನುಮೋದನೆ ನೀಡಿದೆ.

ಬೆಂಗಳೂರು – ಬೆಳಗಾವಿ ವಿಶೇಷ ರೈಲು ಸೇವೆಗಳ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06511 – ಎಸ್ಎಂವಿಟಿ ಬೆಂಗಳೂರು – ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್ ರೈಲು: ಮಾರ್ಚ್ 28, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 07:30ಕ್ಕೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06512 – ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು: ಮಾರ್ಚ್ 29, 2025 ರಂದು ಸಂಜೆ 5:00 ಗಂಟೆಗೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲು ಸಂಖ್ಯೆ 06513 – ಎಸ್ಎಂವಿಟಿ ಬೆಂಗಳೂರು-ಬೆಳಗಾವಿ ವಿಶೇಷ ಎಕ್ಸ್​ಪ್ರೆಸ್ ರೈಲು: ಮಾರ್ಚ್ 30, 2025 ರಂದು ಸಂಜೆ 7:00 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು, ಮರುದಿನ ಬೆಳಗ್ಗೆ 07:30ಕ್ಕೆ ಬೆಳಗಾವಿ ತಲುಪಲಿದೆ.

ರೈಲು ಸಂಖ್ಯೆ 06514 – ಬೆಳಗಾವಿ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು: ಮಾರ್ಚ್ 31, 2025 ರಂದು ಸಂಜೆ 5:30ಕ್ಕೆ ಬೆಳಗಾವಿಯಿಂದ ಹೊರಟು, ಮರುದಿನ ಬೆಳಗಿನ ಜಾವ 04:30ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ವಿಶೇಷ ರೈಲು ಎಲ್ಲೆಲ್ಲಿ ನಿಲುಗಡೆ?: ಈ ವಿಶೇಷ ರೈಲುಗಳು (06511/12 ಮತ್ತು 06513/14) ಎರಡೂ ಮಾರ್ಗಗಳಲ್ಲಿ ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಅಳ್ನಾವರ, ಲೋಂಡಾ ಮತ್ತು ಖಾನಾಪುರ ನಿಲ್ದಾಣಗಳಲ್ಲಿ ನಿಲುಗಡೆಯಾಗಲಿವೆ.

ಬೋಗಿಗಳ ಸಂಯೋಜನೆ: ಈ ರೈಲುಗಳಲ್ಲಿ 1-ಫಸ್ಟ್ ಎಸಿ ಕೋಚ್, 2-ಎಸಿ ಟು ಟೈರ್ ಬೋಗಿಗಳು, 5-ಎಸಿ ತ್ರಿ ಟೈರ್ ಬೋಗಿಗಳು, 8-ಸ್ಲೀಪರ್ ಕ್ಲಾಸ್ ಬೋಗಿಗಳು, 4-ಜನರಲ್ ಸೆಕೆಂಡ್ ಕ್ಲಾಸ್ ಬೋಗಿಗಳು ಮತ್ತು ಎಸ್ಎಲ್ಆರ್ / ಡಿ ಬೋಗಿಗಳು ಇರಲಿವೆ.

ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರ್​​ಗಳನ್ನು ಸಂಪರ್ಕಿಸಬಹುದು ಎಂದು ರೈಲ್ವೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ