Breaking News

ಬೋರವೆಲ್ ಗಳನ್ನು ರೀ ಚಾರ್ಜ ಮಾಡಿಸಲು ಕ್ರಮ ಕೈಗೊಳ್ಳಿ; ವಿನಾಯಕ ಪೂಜಾರ

Spread the love

ಹುಕ್ಕೇರಿ : ಹೋಸದಾಗಿ ಬೋರವೆಲ್ ಗಳನ್ನು ಹಾಕುವ ಬದಲು ಇದ್ದ ಕೋಳವೇ ಭಾವಿಗಳಿಗೆ ನೀರು ಸಂಗ್ರಹವಾಗುವಂತೆ ನೋಡಿಕೋಳ್ಳ ಬೇಕು ಎಂದು ಹುಕ್ಕೇರಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ವಿನಾಯಕ ಪೂಜಾರ ಹೇಳಿದರು.
ವಿಶ್ವ ಜಲ ದಿನ ಅಂಗವಾಗಿ ಹುಕ್ಕೇರಿ ಕಾನೂನು ಸೇವಾ ಸಮಿತಿ,ನ್ಯಾಯವಾದಿಗಳ ಸಂಘ ಮತ್ತು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಸಹಕಾರದಿಂದ ಜರುಗಿದ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಹಿರಿಯ ಸಿವ್ಹಿಲ್ ನ್ಯಾಯಾಧೀಶ ಕೆ ಎಸ್ ರೋಟ್ಟೆರ ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿದ ಕಾರ್ಯಕ್ರಮದಲ್ಲಿ ನ್ಯಾಯವಾದುಗಳ ಸಂಘದ ಅದ್ಯಕ್ಷ ಕಾಡಪ್ಪಾ ಕುರಬೇಟ ಮಾತನಾಡಿ ಸರ್ಕಾರದ ಯೋಜನೆಗಳು ಪ್ರತಿ ಮನೆ ಮನೆಗಳಿಗೆ ತಲುಪಿಸುವ ಕಾರ್ಯ ಅಧಿಕಾರಿಗಳಿಂದ ಮಾತ್ರ ಸಾಧ್ಯ ಕಾರಣ ಕೇಂದ್ರ ಸರ್ಕಾರದ ಜಲ ಜಿವನ ಮಿಷನ್ ಯೋಜನೆಯಿಂದ ಗ್ರಾಮಿಣ ಭಾಗದ ಪ್ರತಿಯೊಂದು ಮನೆಗಳಿಗೆ ಶುದ್ಧ ಕುಡಿಯುವ ನೀರು ಪೋರೈಸಲಾಗುತ್ತಿದೆ,ನೀರಿನ ಮಹತ್ವ ಅರಿದು ಬಳಕೆಮಾಡಬೇಕು ಎಂದು ಸಲಹೆ ನೀಡಿದರು
ವೇದಿಕೆ ಮೇಲೆ ನ್ಯಾಯವಾದಿಗಳ ಸಂಘದ ಉಪಾಧ್ಯಕ್ಷ ಬಿ ಎಮ್, ಜಿನರಾಳೆ, ಕಾರ್ಯದರ್ಶಿ ಎಸ್ ಜೆ ನದಾಫ್, ವಿಠ್ಠಲ ಘಸ್ತಿ, ಅವಿನಾಶ್ ಹೋಳೆಪ್ಪಗೋಳ, ಅಭಿಷೇಕ ಪವಾರ, ಎಮ್ ಡಿ ಕೋಳಿ ಲಕ್ಷ್ಮಿನಾರಾಯಣ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವಿವಿಧ ಇಲಾಖೆ ಅಧಿಕಾರಿಗಳು ,ಸಾರ್ವಜನಿಕರು ,ನ್ತಾಯವಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ