Breaking News

ಹಾಲು, ಮೊಸರು ಬೆಲೆ ಏರಿಕೆ ಬೆನ್ನಲ್ಲೇ ವಿದ್ಯುತ್‌ ದರ ಹೆಚ್ಚಳ

Spread the love

ಬೆಂಗಳೂರು, (ಮಾರ್ಚ್​ 27): ಸಿದ್ದರಾಮಯ್ಯ (Siddaramaiah) ನೇತೃತ್ವದಲ್ಲಿ ಇಂದು(ಮಾರ್ಚ್ 27) ನಡೆದ ಸಚಿವ ಸಂಪುಟದಲ್ಲಿ ನಂದಿನಿ ಹಾಲು (Nandini Milk) ಹಾಗೂ ಮೊಸರು ದರ ಏರಿಕೆಗೆ ಗ್ರೀನ್ ಸಿಗ್ನಲ್​ ನೀಡಿದೆ. ಹೀಗಾಗಿ ನಂದಿನಿ ಹಾಲು ಮತ್ತು ಮೊಸರು ಪ್ರತಿ ಲೀಟರ್​​ಗೆ ಬರೋಬ್ಬರಿ 4 ರೂಪಾಯಿ ಏರಿಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಇಂದೇ ಕರ್ನಾಟಕ ವಿದ್ಯುತ್‌ ನಿಯಂತ್ರಣ ಆಯೋಗ (ಕೆಇಆರ್‌ಸಿ) ಜನರಿಗೆ ವಿದ್ಯುತ್ ಶಾಕ್ ಕೊಟ್ಟಿದೆ. ಹೌದು…ಪ್ರತಿ ಯೂನಿಟ್‌ಗೆ 36 ಪೈಸೆ ಹೆಚ್ಚಳ ಮಾಡಿ ಕೆಇಆರ್‌ಸಿ ಇಂದು (ಗುರುವಾರ) ಅಧಿಕೃತ ಆದೇಶ ಹೊರಡಿಸಿದ್ದು, ಪರಿಷ್ಕೃತ ವಿದ್ಯುತ್ ದರ ಏಪ್ರಿಲ್‌ 1ರಿಂದಲೇ ಅನ್ವಯವಾಗಲಿದೆ.

ಯೂನಿಟ್‍ಗೆ 49 ಪೈಸೆ ಏರಿಕೆ ಮಾಡುವಂತೆ ಡಿಸೆಂಬರ್ ಕೊನೆಯ ವಾರದಲ್ಲಿ ಎಸ್ಕಾಂಗಳು ಕೆಇಆರ್‌ಸಿ ಪ್ರಸ್ತಾವನೆ ಸಲ್ಲಿಸಿದ್ದವು. ಪ್ರಸ್ತಾವನೆಯಂತೆ ಉತ್ಪಾದನೆಯ ಖರ್ಚು-ವೆಚ್ಚ ಮತ್ತು ನಿರ್ವಹಣೆಯ ನಷ್ಟ ಸರಿದೂಗಿಸುವ ನಿಟ್ಟಿನಲ್ಲಿ ದರ ಏರಿಕೆಗೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಹೀಗಾಗಿ ಇಂದು (ಮಾರ್ಚ್ 27) ಕೆಇಆರ್‌ಸಿ ಅಧಿಕೃತವಾಗಿ ಪ್ರತಿ ಯೂನಿಟ್​ ವಿದ್ಯುತ್​ಗೆ 36 ಪೈಸೆ ಏರಿಕೆ ಮಾಡಿ ಆದೇಶ ಹೊರಡಿಸಿದೆ.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ