Breaking News

ಪತ್ನಿ ಕೊಂದು ಸೂಟ್​​ಕೇಸ್‌ನಲ್ಲಿ ತುಂಬಿಟ್ಟ ಪತಿ

Spread the love

ಬೆಂಗಳೂರು: ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದ್ದ ಹತ್ಯೆ‌ ಪ್ರಕರಣ ಮಾಸುವ‌ ಮುನ್ನವೇ‌ ಅದೇ ಮಾದರಿಯಲ್ಲಿ ವ್ಯಕ್ತಿಯೋರ್ವ ತನ್ನ ಪತ್ನಿಯನ್ನು ಕೊಲೆ ಮಾಡಿ, ಬಳಿಕ ಆಕೆಯ ದೇಹವನ್ನು ತುಂಡರಿಸಿ ಸೂಟ್​​ಕೇಸ್‌ನಲ್ಲಿ ತುಂಬಿಟ್ಟಿರುವ ಭಯಾನಕ‌ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಪತ್ನಿಯ ಪೋಷಕರಿಗೆ ಕರೆ ಮಾಡಿದ ಆರೋಪಿ: ಹುಳಿಮಾವು ವ್ಯಾಪ್ತಿಯ ದೊಡ್ಡ ಕಮ್ಮನಹಳ್ಳಿಯ ಮನೆಯೊಂದರಲ್ಲಿ ಘಟನೆ ನಡೆದಿದೆ. ಮಹಾರಾಷ್ಟ್ರ ಮೂಲದ ರಾಕೇಶ್​ ಎಂಬಾತ ತನ್ನ ಪತ್ನಿ ಗೌರಿ ಸಾಂಬೆಕರ್ (32) ಎಂಬವಳನ್ನು ಕೊಲೆಗೈದು, ಬಳಿಕ ಮೃತದೇಹವನ್ನು ತುಂಡು ತುಂಡು ಮಾಡಿ ಸೂಟ್​​ಕೇಸ್​ನಲ್ಲಿ ತುಂಬಿಟ್ಟಿದ್ದ. ನಂತರ ‘ಪತ್ನಿ ಆತ್ಮಹತ್ಯೆಗೆ ಶರಣಾಗಿರುವುದಾಗಿ’

husband-kills-wife-and-kept-her-body-in-suitcase-at-bengaluru

ಆಕೆಯ ಪೋಷಕರಿಗೆ ಕರೆ ಮಾಡಿ ತಿಳಿಸಿದ್ದಾನೆ. ಇದರಿಂದ ಬೆಚ್ಚಿಬಿದ್ದ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರದ ಸ್ಥಳೀಯ ಪೊಲೀಸ್​ ಠಾಣೆಗೆ ತೆರಳಿ ರಾಕೇಶ್​ ಕೃತ್ಯವನ್ನು ತಿಳಿಸಿದ್ದಾರೆ.ಮಹಾರಾಷ್ಟ್ರ ಪೊಲೀಸರು‌ ನೀಡಿದ ಸೂಚನೆ ಆಧರಿಸಿ, ಬೆಂಗಳೂರಿನ ಹುಳಿಮಾವು ಪೊಲೀಸರು ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ‌ ಕೃತ್ಯ ಬಯಲಾಗಿದೆ. ಸದ್ಯ ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕೃತ್ಯಕ್ಕೆ‌ ಕಾರಣ ತಿಳಿಯಬೇಕಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Spread the love

About Laxminews 24x7

Check Also

ಬಂಗಾರ ಪ್ರಿಯರಿಗೆ ಗುಡ್‌ ನ್ಯೂಸ್‌ – 10 ಗ್ರಾಂ ಚಿನ್ನದ ಬೆಲೆ 2,900 ರೂ. ಇಳಿಕೆ

Spread the loveಬೆಂಗಳೂರು: ಕೊಲ್ಲಿ ರಾಷ್ಟ್ರಗಳ ಯುದ್ಧದ ಬಿಸಿ ನಡುವೆಯೂ ಬಂಗಾರ ಪ್ರಿಯರಿಗೆ ಗುಡ್‌ನ್ಯೂಸ್‌ ಸಿಕ್ಕಿದೆ. ಸತತ ಏರುಗತಿಯಲ್ಲಿ ಸಾಗುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ