Breaking News

ಕಾಂಗ್ರೆಸ್ಸೇ ಒಂದು ಹನಿಟ್ರ್ಯಾಪ್‌ ಕಂಪನಿ

Spread the love

ಮೈಸೂರು: “ಕಾಂಗ್ರೆಸ್ಸೇ ಒಂದು ಹನಿಟ್ರ್ಯಾಪ್‌ ಕಂಪನಿ. ಹನಿಟ್ರ್ಯಾಪ್‌ ಜೊತೆ ಫೋನ್‌ ಟ್ಯಾಪ್‌ ಕೂಡ ಮಾಡಲಾಗುತ್ತಿದೆ. ಆದರೆ ಇವುಗಳ್ಯಾವುದರ ಬಗ್ಗೆಯೂ ಸಿಎಂ ಸಿದ್ದರಾಮಯ್ಯ ಮಾತನಾಡುತ್ತಿಲ್ಲ. ಸಿಎಂ ಅವರೇ ಯಾವುದಾದರೂ ಟ್ರ್ಯಾಪ್​ಗೆ ಒಳಗಾಗಿದ್ದಾರೋ ಎನ್ನುವ ಅನುಮಾನವಿದೆ” ಎಂದು ವಿಧಾನ ಪರಿಷತ್‌ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿದರು.

ಇಂದು ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್‌ ಪಕ್ಷ ಒಳಗಿರುವವರ ವಿರುದ್ಧ ಕೆಲಸ ಮಾಡುತ್ತಿದೆ. ಅವರನ್ನೇ ಟಾರ್ಗೆಟ್‌ ಮಾಡಿ ಹನಿಟ್ರ್ಯಾಪ್‌ ಮಾಡುತ್ತಿದೆ” ಎಂದು ದೂರಿದರು.ಡಿಸಿಎಂ ಡಿಕೆಶಿ ಮುಸ್ಲಿಮರಿಗೆ ಮೀಸಲಾತಿ ನೀಡಲು ಸಂವಿಧಾನ ಬದಲಾವಣೆ ಮಾಡುತ್ತೇವೆ ಎಂದು ಹೇಳಿಕೆ ನೀಡಿ, ಈಗ ಅದನ್ನು ಸಾಬೀತು ಮಾಡಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಹೇಳಿದ್ದಾರೆ. ಇದೊಂದು ವಿಪರ್ಯಾಸ. ಇದರ ವಿರುದ್ಧ ರಾಜ್ಯದಲ್ಲಿ ಪ್ರತಿಭಟನೆ ಮಾಡುತ್ತಿದ್ದೇವೆ, ನಿಲ್ಲಿಸುವುದಿಲ್ಲ” ಎಂದು ತಿಳಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ