Breaking News

ರೈತರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ…!!!

Spread the love

ರೈತರ ಜಮೀನಿನಲ್ಲಿ ಚಿರತೆ ಪ್ರತ್ಯಕ್ಷ…!!!
ಜನರಲ್ಲಿ ಮೂಡಿದ ಆತಂಕ… ಸಿಸಿಟ್ಹಿವಿಯಲ್ಲಿ ಸೆರೆಯಾಯ್ತು ದೃಶ್ಯ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಸಂಪಗಾಂವ ಮತ್ತು ಪಟ್ಟಿಹಾಳ ಕೆ.ಎಸ್ ಗ್ರಾಮದ ಹೊರವಲಯದಲ್ಲಿ ಚಿರತೆಯೊಂದು ಕಾಣಿಸಿಕೊಂಡಿದೆ. ನರಿ ಬೇಟೆ ಆಡಿರುವ ಚಿರತೆ ಓಡಾಡುವ ದೃಶ್ಯಗಳು ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ ಕ್ಯಾಮೆರಾದಲ್ಲೂ ಚಿರತೆ ಸೆರೆಯಾಗಿವೆ. ರಾತ್ರಿ ಹೊತ್ತು ಜಮೀನಿನಲ್ಲಿ ಯಾರು ಹೋಗದಂತೆ ಈಗಾಗಲೇ ಅರಣ್ಯ ಇಲಾಖೆ ಸಿಬ್ಬಂದಿ ಎಚ್ಚರಿಕೆಯನ್ನು ನೀಡಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳು ಚಿರತೆ ಸೆರೆಗೆ ನಾಲ್ಕು ಕಡೆಗಳಲ್ಲಿ ಬೋಣು ಇಟ್ಟಿದ್ದಾರೆ. ಬೈಲಹೊಂಗಲ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ