Breaking News

ಯುಗಾದಿ ಹಬ್ಬದ ಜೂಜಾಟಕ್ಕೆ ಬ್ರೇಕ್​

Spread the love

ಮಂಡ್ಯ: ಯುಗಾದಿ ಹಬ್ಬದ ಪ್ರಯುಕ್ತ ಮಂಡ್ಯ ಜಿಲ್ಲಾದ್ಯಂತ ಇಸ್ಪೀಟು ಸೇರಿದಂತೆ ಇತರ ಅಕ್ರಮ ಜೂಜಾಟ ಮತ್ತು ಬೆಟ್ಟಿಂಗ್ ನಡೆಸುವುದನ್ನು ನಿಷೇಧಿಸಲಾಗಿದ್ದು, ಅಂತಹ ಘಟನೆಗಳು ಕಂಡು ಬಂದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ ತಿಳಿಸಿದ್ದಾರೆ.

 

ಯುಗಾದಿ ಹಬ್ಬದಂದು ಎಲ್ಲ ಮಾದರಿಯ ಜೂಜಾಟಗಳನ್ನು ನಿಷೇಧಿಸಿದ್ದು, ಒಂದು ವೇಳೆ, ಪೊಲೀಸರ ಎಚ್ಚರಿಕೆ ಕಡೆಗಣಿಸಿ ಜೂಜಾಟ ಆಡುವುದು ಹಾಗೂ ಜೂಜು ಅಡ್ಡೆ ನಡೆಸುವವರ ಮೇಲೆ ಗೂಂಡಾ ಕಾಯ್ದೆ ದಾಖಲಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

 

ಯುಗಾದಿ ಹಬ್ಬದ ಸಂದರ್ಭದಲ್ಲಿ ಹಾಗೂ ಇತರ ದಿನಗಳಲ್ಲಿ ಎಲ್ಲಿಯಾದರೂ ಜೂಜಾಟ ಆಡುತ್ತಿರುವುದು ಕಂಡು ಬಂದರೆ ಸಾರ್ವಜನಿಕರು ಹತ್ತಿರದ ಪೊಲೀಸ್​ ಠಾಣೆಗೆ ಮಾಹಿತಿ ನೀಡುವಂತೆ ಎಸ್​ಪಿ ಮನವಿ

ಮಾಡಿದ್ದಾರೆ.ಯುಗಾದಿ ಹಬ್ಬ ಎಂದರೆ ಜನರಲ್ಲಿ ಹಳೇ ಮೈಸೂರು ಭಾಗದ ಮಂಡ್ಯದಲ್ಲಿ ಸಡಗರ ಮನೆ ಮಾಡಿರುತ್ತದೆ. ಹಬ್ಬದಂದು ಹೊಸ ಬಟ್ಟೆ ತೊಟ್ಟು, ಹಬ್ಬದೂಟ ಸವಿದು, ಪರಸ್ಪರ ಶುಭಾಶಯ ಕೋರುವುದರ ಜೊತೆಗೆ ಜೂಜಾಟ ಆಡುವ ಪದ್ಧತಿ ಕೂಡ ಗತಕಾಲದಿಂಲೂ ನಡೆದುಕೊಂಡು ಬಂದಿದೆ. ಯುಗಾದಿ ಹಬ್ಬದ

ಸಂಭ್ರಮಕ್ಕೆ ಕ್ಷಣಗಣನೆ ಪ್ರಾರಂಭವಾಗಿದ್ದು, ಹಬ್ಬದ ಆಚರಣೆ ನೆಪದಲ್ಲಿ ಇಸ್ಪೀಟು ಆಟ, ಚೌಕಬಾರ ಸೇರಿದಂತೆ ನಾನಾ ಬಗೆಯ ಜೂಜಾಟವನ್ನು ಮಂಡ್ಯ ಜಿಲ್ಲಾ ಪೊಲೀಸರು ಜೂಜಾಟ ನಿಷೇಧಿಸಿ, ಖಡಕ್​ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ