Breaking News

ಜಿಲ್ಲೆಗಳ ಸರ್ಕಾರಿ ಕೆಲಸದ ಅವಧಿ ಬದಲಾವಣೆ

Spread the love

ಬೆಂಗಳೂರು: ಬಿರು ಬೇಸಿಗೆ ಹಿನ್ನೆಲೆ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಸರ್ಕಾರಿ ಕಚೇರಿ ಕೆಲಸದ ವೇಳೆಯಲ್ಲಿ ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕಿತ್ತೂರು ಕರ್ನಾಟಕದ ಈ ಜಿಲ್ಲೆಗಳಲ್ಲೂ ಕೆಲಸದ ಅವಧಿ ಬದಲಾವಣೆ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಈ ಸಂಬಂಧ ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯತೆ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯ ಬದಲಾಯಿಸುವಂತೆ ಕೋರಿದ್ದರು.

ಬೆಳಗ್ಗೆ 8 ರಿಂದ ಮಧ್ಯಾಹ್ನ 1:30ರವರೆಗೆ ಮಾತ್ರ ಕೆಲಸ: ಈ ಹಿನ್ನೆಲೆಯಲ್ಲಿ ಏಪ್ರಿಲ್ ಮತ್ತು ಮೇನಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಬೆಳಗ್ಗೆ 10 ಸಂಜೆ 5.30 ವರೆಗಿನ ಸರ್ಕಾರಿ ಕಚೇರಿ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ತಿಂಗಳುಗಳಲ್ಲಿ ಬೆಳಿಗ್ಗೆ 8 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾಯಿಸಿ ಆದೇಶಿಸಲಾಗಿದೆ.‌


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ