Breaking News

ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು

Spread the love

ಶಾಸಕ ರಾಜು ಕಾಗೆ ಸಹೋದರನ ಪುತ್ರನ ಕಾರು – ಬೈಕ್ ಗೆ ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ಪಟ್ಟಣದ ಹೊರ ವಲಯದ ಪುನಾ ಬೆಂಗಳೂರು ಹೆದ್ದಾರಿಯಲ್ಲಿ ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಪ್ರಯಾಣಿಸುತ್ತಿದ್ದ ಕಾರು ಬೈಕ್ ಗೆ ಗುದ್ದಿದ್ದರಿಂದ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.
ಮೂಲತಃ ಗೋಕಾಕದ ಬಸವರಾಜ ಪುಡಕಲಕಟ್ಟಿ ಹಾಗೂ ಸ್ನೇಹಿತರು ಕೆಲಸಕ್ಕಾಗಿ ಬೆಳಗಾವಿಯಿಂದ ಕಿತ್ತೂರ ಕಡೆಗೆ ಬೈಕ್ ಮೇಲೆ ಬರುತ್ತಿದ್ದರು. ಶಾಸಕ ರಾಜು ಕಾಗೆ ಅವರ ಸಹೋದರನ ಪುತ್ರ ಶ್ರೀಪಾದ ಸಿದ್ದನಗೌಡ ಕಾಗೆ ಪ್ರಯಾಣಿಸುತ್ತಿದ್ದ ಕಾರು ಬೈಕಗೆ ಗುದ್ದಿದ್ದರಿಂದ ಬಸವರಾಜ ಸ್ಥಳದಲ್ಲೇ ಮೃತಪಟ್ಟಿದ್ದಾನೆ.
ಸ್ನೇಹಿತರಾದ ಸಣ್ಣ ವಿಠಲ ದುರದುಂಡಿ ಹಾಗೂ ನಿಂಗಪ್ಪ ಹೆಬ್ಬಾಳಗೆ ಗಂಭೀರ ಗಾಯಗಳಾಗಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸವರಾಜ ಪುಡಕಲಕಟ್ಟಿಯ ಶವವನ್ನು ಬೆಳಗಾವಿ ಬಿಮ್ಸಗೆ ರವಾನಿಸಲಾಗಿದೆ
ಸ್ಥಳಕ್ಕೆ ಕಿತ್ತೂರು ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ಮಾಡಿದರು
ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Spread the love

About Laxminews 24x7

Check Also

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Spread the love ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್ ಖಾನಾಪೂರ ತಾಲೂಕಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ