Breaking News

ವಿಕಲಚೇತನ ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ!

Spread the love

ತುಮಕೂರು, (ಏಪ್ರಿಲ್ 03): ಸರ್ಕಾರಿ ನೌಕರನೋರ್ವ (government employee) ತನ್ನ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಕೊಂದು ಬಳಿಕ ತಾನು ಸಹ ಆತ್ಮಹತ್ಯೆ (Suiicde) ಮಾಡಿಕೊಂಡಿರುವ ಘಟನೆ

ಕಲಬುರಗಿಯಲ್ಲಿ (Kalaburagi) ನಡೆದಿದೆ. ಘಟನೆ ನಡೆದ 24 ಗಂಟೆಯಲ್ಲೇ ತುಮಕೂರಿನಲ್ಲಿ (Tumakuru) ಮಹಿಳೆಯೋರ್ವಳು(Woman) ತನ್ನಿಬ್ಬರು ಮಕ್ಕಳ ಜತೆ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿ ವಿಜಯಲಕ್ಷ್ಮೀ(45), ಮಗಳು ಚೂಡಾಮಣಿ(23), ಪುತ್ರ ನರಸಿಂಹರಾಜು(14) ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.

ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ಈ ದುರಂತ ನಡೆದಿದೆಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಚೇಳೂರು ಠಾಣೆ ಪೊಲೀಸರ ಭೇಟಿ ತನಿಖೆ ಕೈಗೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ