Breaking News

197 ಡ್ರಗ್ಸ್ ಬಳಕೆದಾರರ ವಿರುದ್ಧ 46 ಪ್ರಕರಣ ದಾಖಲ

Spread the love

ಹುಬ್ಬಳ್ಳಿ: ಈ ವರ್ಷ ದಾಖಲಾದ ಮಾದಕ ವಸ್ತು ಮಾರಾಟ ಪ್ರಕರಣಗಳನ್ನು ಪರಿಶೀಲನೆ ಮಾಡಲಾಗಿದೆ ಎಂದು ಹುಬ್ಬಳ್ಳಿ -ಧಾರವಾಡ ಪೊಲೀಸ್​ ಆಯುಕ್ತರು ತಿಳಿಸಿದ್ದಾರೆ.

ಮಾದಕ ವಸ್ತು ಮಾರಾಟ ಪ್ರಕರಣಗಳನ್ನು ಪರಿಶೀಲಿಶಿ ಯಾರಿಗೆ ಮಾರಾಟ ಮಾಡಿದ್ದಾರೆಂಬ ಮಾಹಿತಿ ಕಲೆಹಾಕಿ 505 ಮಂದಿಯನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ 197 ಮಂದಿ ಡ್ರಗ್ಸ್​ ಸೇವಿಸುತ್ತಿರುವುದು ಪತ್ತೆಯಾಗಿದೆ. ಇವರ ವಿರುದ್ಧ 46 ಪ್ರಕರಣ ದಾಖಲಿಸಲಾಗಿದೆ ಎಂದು ಆಯುಕ್ತರು ಹೇಳಿದ್ದಾರೆ.

ಮಾದಕ ವ್ಯಸನಿಗಳಿಗೆ ಶಿಬಿರ: ಇಲ್ಲಿನ ಆರ್.ಎನ್. ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದ ಮಾದಕ ವ್ಯಸನಿಗಳ ಜಾಗೃತಿ ಶಿಬಿರದಲ್ಲಿ ಭಾಗವಹಿಸಿ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ಅವಳಿ ನಗರವನ್ನು ಮಾದಕ ವಸ್ತುಗಳಿಂದ ಮತ್ತು ಮಾದಕ ವ್ಯಸನಿಗಳಿಂದ ಮುಕ್ತ ಮಾಡಬೇಕೆಂದು ಸಾಕಷ್ಟು ಕ್ರಮಗಳನ್ನು ನಮ್ಮ ಇಲಾಖೆಯಿಂದ ತೆಗೆದುಕೊಳ್ಳಲಾಗುತ್ತಿದೆ. ಜಿಲ್ಲಾಡಳಿತದ ಜೊತೆ ಸಾಕಷ್ಟು ಸಭೆಗಳನ್ನು ಮಾಡಿ ಇತರ ಇಲಾಖೆಗಳ ಸಹಕಾರವನ್ನು ಕೇಳಿದ್ದೇವೆ ಎಂದರು.

ಈ ಸಂಬಂಧ ನಾಲ್ಕು ಬಾರಿ ಕಾರ್ಯಾಚರಣೆ: ಮಾದಕ ವಸ್ತು ಮಾರಾಟ ಮಾಡುವ ಪೆಡ್ಲರ್‌ಗಳ ಮೇಲೆ ನಿಗಾವಹಿಸಲಾಗುತ್ತಿದೆ.‌ ಈ ಹಿಂದೆ ನಾಲ್ಕು ಬಾರಿ ಕಾರ್ಯಾಚರಣೆ ನಡೆಸಲಾಗಿತ್ತು. ಆಗ ಎರಡು ಸಾವಿರ ಮಂದಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಸಾವಿರಕ್ಕೂ ಹೆಚ್ಚು ಜನರಲ್ಲಿ ಪಾಸಿಟಿವ್ ಕಂಡು ಬಂದಿತ್ತು ಎಂದು ಹೇಳಿದರು.

200ಕ್ಕೂ ಹೆಚ್ಚು ಪ್ರಕರಣ ದಾಖಲು: 200ಕ್ಕೂ ಹೆಚ್ಚು ಪ್ರಕರಣ ಆಗ ದಾಖಲಿಸಲಾಗಿತ್ತು. ಈಗ ಐದನೇ ಬಾರಿ ಈ ಅಭಿಯಾನ ನಡೆಸಲಾಗಿದ್ದು, ಶೇ. 40ರಷ್ಟು ಜನರಲ್ಲಿ ಪಾಸಿಟಿವ್ ಕಂಡುಬಂದಿದೆ. ಮೊದಲ ಬಾರಿ ಪಾಸಿಟಿವ್​ ಪ್ರಕರಣ ಕಂಡುಬಂದವರನ್ನು ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಗೆ ಅವಕಾಶ ಇರುತ್ತದೆ. ಎರಡನೇ ಬಾರಿ ಪಾಸಿಟಿವ್​ ಕಂಡುಬಂದರೆ ಅಂಥವರನ್ನು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಬಹುದು ಎಂದು ತಿಳಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ