Breaking News

ಎರಡೇ ವಾರಕ್ಕೆ ಮುರಿದು ಬಿತ್ತು ಹಿಂದೂ ಯುವಕ, ಮುಸ್ಲಿಂ ಯುವತಿಯ ಪ್ರೇಮ ವಿವಾಹ

Spread the love

ಚಿಕ್ಕಬಳ್ಳಾಪುರ, (ಏಪ್ರಿಲ್ 07): ಮುಸ್ಲಿಂ ಯುವತಿ ಹಾಗೂ ಹಿಂದೂ ಯುವಕ ಪ್ರೇಮ ವಿವಾಹ (Love Marriage) ಎರಡೇ ವಾರಕ್ಕೆ ಮುರಿದುಬಿದ್ದಿದೆ. ಎದುರು ಬದುರು ಮನೆಯವರಾಗಿದ್ದ

ಚಿಕ್ಕಬಳ್ಳಾಪುರ (Chikkaballapura) ತಾಲೂಕಿನ ಮೈಲಪನಹಳ್ಳಿ ಗ್ರಾಮದ ಫಸಿಯಾ ಹಾಗೂ ನಾಗಾರ್ಜುನ ಪರಸ್ಪರ ಪ್ರೀತಿಸುತ್ತಿದ್ದರು. ಆದ್ರೆ, ಇಬ್ಬರ ಮದ್ವೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದರು. ಹೀಗಾಗಿ ಈ ಜೋಡಿ ಮನೆಬಿಟ್ಟು ಹೋಗಿ ಪ್ರೇಮ ವಿವಾಹವಾಗಿತ್ತು. ಆದ್ರೆ, ಇದೀಗ 15 ದಿನದಲ್ಲೇ ಈ ಪ್ರೇಮ ವಿವಾಹ ಅಂತ್ಯಕಂಡಿದೆ.

ತಾಯಿಗೆ ಅನಾರೋಗ್ಯದ ಕಾರಣ ನೀಡಿ ಫಸಿಯಾ, ನಾಗಾರ್ಜುನನನ್ನು ಸಂಸಾರ ಎನ್ನುವ ಸಾಗರದ ನಡು ನೀರಿನಲ್ಲೇ ಬಿಟ್ಟು ತವರಿಗೆ ವಾಪಸ್​​ ಹೋಗಿದ್ದಾಳೆ. ಇದರಿಂದ ಫಸಿಯಾಳನ್ನು ನಂಬಿ ಹೋಗಿದ್ದ ನಾಗಾರ್ಜುನ ಈಗ ಕಂಗಾಲಾಗಿದ್ದಾನೆ.ಮಾರ್ಚ್ 24ರಂದು ಪ್ರೇಮ ವಿವಾಹವಾಗಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಬಂದಿದ್ರು. ಆದ್ರೆ, ಇದೀಗ ಮದುವೆಯಾಗಿ 15 ದಿನ ಕಳೆಯೋದರೊಳಗೆ ಯುವತಿ ಫಸಿಹಾ ತಾಯಿ ಮನೆ ಸೇರಿಕೊಂಡಿದ್ದಾಳೆ.

ತಾಯಿಗೆ ಅನಾರೋಗ್ಯ ಇದೆ. ನನ್ನ ನೋವಲ್ಲೇ ಕೊರಗಿ ನೋವಿನಲ್ಲಿದ್ದಾರೆ ಎನ್ನುವ ಕಾರಣ ನೀಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟು ತಾಯಿ ಮನೆ ವಾಪಸ್ ಹೋಗಿದ್ದಾಳೆ.


Spread the love

About Laxminews 24x7

Check Also

20 ವರ್ಷಕ್ಕೂ ಮೇಲ್ಪಟ್ಟು ಸೆರೆವಾಸಕ್ಕೆ ಗುರಿಯಾದವರ ಶಿಕ್ಷೆ ಮಾಫಿ ಮನವಿ ತಿರಸ್ಕರಿಸಬೇಕೆಂಬ ನಿಯಮವಿಲ್ಲ: ಹೈಕೋರ್ಟ್

Spread the loveಬೆಂಗಳೂರು: ಇಪ್ಪತಕ್ಕೂ ಹೆಚ್ಚು ವರ್ಷಗಳ ಕಾಲ ಸೆರೆವಾಸಕ್ಕೊಳಗಾಗುವ ಅಪರಾಧಿಗಳು ನಿಗದಿತ ಅವಧಿಯ ಜೈಲು ವಾಸದ ಬಳಿಕ ಶಿಕ್ಷೆಯ ಮಾಫಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ