Breaking News

ನೀರಾವರಿ ನಿಗಮದ ಇಬ್ಬರು ಅಧಿಕಾರಿಗಳು ಲೋಕಾಯುಕ್ತ ಬಲೆಗೆ

Spread the love

ಮೈಸೂರು: ಲಂಚ ಸ್ವೀಕರಿಸುತ್ತಿದ್ದ ನಂಜನಗೂಡು ಕಾವೇರಿ ನೀರಾವರಿ ನಿಗಮ ನಿಯಮಿತದ ಕಾರ್ಯಪಾಲಕ ಅಭಿಯಂತರ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಅವರನ್ನು ಸೋಮವಾರ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡಾಗಿ ಹಿಡಿದಿದ್ದಾರೆ. ಈ ಅಧಿಕಾರಿಗಳು 1.45 ಲಕ್ಷ ರೂ.ಲಂಚದ ಹಣ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದಾರೆ.

ಕಾರ್ಯಪಾಲಕ ಅಭಿಯಂತರ ಕಾವೇರಿ ರಂಗನಾಥ್ ಮತ್ತು ಅಕೌಂಟ್ ಸೂಪರಿಂಟೆಂಡೆಂಟ್ ಉಮಾ ಮಹೇಶ್ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಚಾಮರಾಜನಗರದ ಅಬ್ದುಲ್ ಅಜೀಜ್ ಎಂಬವರಿಂದ ಅಧಿಕಾರಿಗಳು 1.45 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದರು. ಅಬ್ದುಲ್ ಅಜೀಜ್ ಕಾವೇರಿ ನೀರಾವರಿ ನಿಗಮದ ಕಾಮಗಾರಿಗಳ ಪ್ರಥಮ ದರ್ಜೆಯ ಗುತ್ತಿಗೆದಾರರಾಗಿದ್ದು, 5 ಕಾಮಗಾರಿಗಳನ್ನು ಮಾಡಿದ್ದಾರೆ. ಅದರ ಬಾಬ್ತು ಬಿಲ್ 23 ಲಕ್ಷ ರೂ ಬಾಕಿ ಇದ್ದು, ಅದನ್ನು ನೀಡಲು ಶೇ.6 ಕಮಿಷನ್ ಆದ 1.45 ಲಕ್ಷ ರೂ ಹಣ ನೀಡುವಂತೆ ಕಾವೇರಿ ರಂಗನಾಥ್ ಮತ್ತು ಉಮಾ ಮಹೇಶ್ ಬೇಡಿಕೆ ಇಟ್ಟಿದ್ದರು. ಹಣ ಪಡೆಯುವಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ