Breaking News

ಪಿಯುಸಿ ರಿಸಲ್ಟ್: ಬಾಲಕಿಯರದ್ದೇ ಮೇಲುಗೈ

Spread the love

ಬೆಂಗಳೂರು: 2024-25ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಈ ಬಾರಿ ಪರೀಕ್ಷೆ ಬರೆದಿದ್ದ 6,37,805 ಲಕ್ಷ ವಿದ್ಯಾರ್ಥಿಗಳ ಪೈಕಿ 4,68,439 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಈ ಮೂಲಕ ಶೇ.73.45ರಷ್ಟು ಫಲಿತಾಂಶ ಬಂದಿದೆ. ಕಳೆದ ಸಾಲಿಗೆ ಹೋಲಿಸಿದರೆ ಶೇ.8ರಷ್ಟು ಕುಸಿತವಾಗಿದೆ.

  • ಕಲಾ ವಿಭಾಗದಲ್ಲಿ ಬಳ್ಳಾರಿಯ ಕೂಡ್ಲಿಗಿ ತಾಲೂಕಿನ ಕೊಟ್ಟೂರಿನ ಇಂದು ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಎಲ್.ಆರ್.ಸಂಜನಾಬಾಯಿ ಅವರಿಗೆ ಒಟ್ಟು 600ರಲ್ಲಿ 597 ಅಂಕ ಬಂದಿದೆ.
  • ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನ ವಿದ್ಯಾರ್ಥಿನಿ ದೀಪಾಶ್ರೀ ಎಸ್. ಅವರು 599 ಅಂಕ ಗಳಿಸುವ ಮೂಲಕ ಟಾಪರ್​ ಆಗಿದ್ದಾರೆ.
  • ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೋಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಅಮೂಲ್ಯ ಕಾಮತ್ ಅವರು 599 ಅಂಕಗಳನ್ನು ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

ಬಾಲಕಿಯರ ಮೇಲುಗೈ: ಹಿಂದಿನ ವರ್ಷಗಳಂತೆ ಈ ಬಾರಿಯೂ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ಬರೆದಿದ್ದ 3,45,694 ವಿದ್ಯಾರ್ಥಿಗಳ ಪೈಕಿ 2,69,212 ಬಾಲಕಿಯರು ತೇರ್ಗಡೆಯಾಗಿದ್ದಾರೆ. 2,92,211 ಬಾಲಕರ ಪೈಕಿ 1,99,227 ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದಾರೆ. ಅದೇ ರೀತಿ, ನಗರ ಪ್ರದೇಶಗಳಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳ ಪೈಕಿ ಶೇ.74.55 ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳ ಪೈಕಿ ಶೇ.69.33ರಷ್ಟು ಮಂದಿ ಪಾಸಾಗಿದ್ದಾರೆ.

ಉಡುಪಿ ಫಸ್ಟ್: ಉಡುಪಿ (ಶೇ.93.90), ದಕ್ಷಿಣ ಕನ್ನಡ (93.57) ಹಾಗೂ ಬೆಂಗಳೂರು ದಕ್ಷಿಣ (85.36) ಕ್ರಮವಾಗಿ ಅತಿ ಹೆಚ್ಚು ಫಲಿತಾಂಶ ಪಡೆದ ಜಿಲ್ಲೆಗಳಾಗಿವೆ.

ಯಾದಗಿರಿ ಲಾಸ್ಟ್: ಯಾದಗಿರಿ (ಶೇ.48.45) ಕಲಬುರಗಿ (55.70) ಹಾಗೂ ರಾಯಚೂರು (58.75) ಜಿಲ್ಲೆಗಳು ಅತಿ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳಾಗಿವೆ.

“ಒಟ್ಟಾರೆ ಶೇ.73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣಗೊಂಡಿದ್ದು ಬರುವ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಿಸುವತ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ