Breaking News

255 ನೀರಿನ ಬಾಟಲ್​ ಮಾದರಿ ಪರೀಕ್ಷೆ; 95 ಅಸುರಕ್ಷಿತ, 88 ಮಾದರಿಗಳು ಕಳಪೆ ಗುಣಮಟ್ಟ- ಸಚಿವ ದಿನೇಶ್​ ಗುಂಡೂರಾವ್​

Spread the love

ಬೆಂಗಳೂರು: ಸಾರ್ವಜನಿಕ ಆರೋಗ್ಯ ದೃಷ್ಟಿಯಿಂದಾಗಿ ಈಗಾಗಲೇ ಕಲರ್​ ಬಳಕೆ ಸೇರಿದಂತೆ ಅಗತ್ಯ ವಸ್ತುಗಳ ವಿರುದ್ಧ ಕ್ರಮಕ್ಕೆ ಮುಂದಾಗಿರುವ ರಾಜ್ಯ ನೀರಿನ ಬಾಟಲ್​ ಸೇರಿದಂತೆ ಹಲವು ವಸ್ತುಗಳ ಸುರಕ್ಷತೆ ಪರೀಕ್ಷೆ ನಡೆಸಿದೆ. ಆರೋಗ್ಯ ಇಲಾಖೆ ಫೆಬ್ರವರಿ -ಮಾರ್ಚ್​ ತಿಂಗಳಲ್ಲಿ ನಡೆಸಿದ ವಿಶೇಷ ಅಭಿಯಾನದಲ್ಲಿ ಕುಡಿಯುವ ನೀರಿನ ಪೂರೈಕೆ ಮಾಡುವ ಬಾಟಲ್​ಗಳಲ್ಲಿ 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ.

ವಿವಿಧ ಬ್ರಾಂಡ್​ಗಳಡಿ ಸ್ಥಳೀಯವಾಗಿ ಮಾರಾಟವಾಗುತ್ತಿರುವ ಶೇ. 70 ರಷ್ಟು ಕುಡಿಯುವ ನೀರಿನ ಬಾಟಲ್​ಗಳು ಅಸುರಕ್ಷಿತ ಎಂಬುದು ಮಾದರಿಗಳ ಪರೀಕ್ಷೆಯಲ್ಲಿ ತಿಳಿದುಬಂದಿರುವುದಾಗಿ ಆರೋಗ್ಯ ಇಲಾಖೆಯ ವರದಿ ಹೇಳಿದೆ. ಈ ಕುರಿತು ಇಂದು ಮಾಧ್ಯಮಗೋಷ್ಟಿ ನಡೆಸಿದ ಆರೋಗ್ಯ ಸಚಿವ ದಿನೇಶ್​ ಗುಂಡೂರಾವ್​, ಫೆಬ್ರುವರಿಯಲ್ಲಿ ಆರೋಗ್ಯ ಇಲಾಖೆಯಿಂದ ನಡೆಸಲಾದ ಅಭಿಯಾನದ ಕುರಿತು ಮಾಹಿತಿ ನೀಡಿದ್ದಾರೆ.

ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ, 95 ಮಾದರಿಗಳು ಅಸುರಕ್ಷಿತ ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿದೆ. ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿದೆ ಎಂದು ತಿಳಿಸಿದರು.

88 ಬ್ರಾಂಡ್​ಗಳ ನೀರಿನ ಬಾಟಲಿಗಳಲ್ಲಿ ಕಳಪೆಮಟ್ಟದ ರಾಸಾಯನಿಕ ಮತ್ತು ಅಪಾಯಕಾರಿ ಬ್ಯಾಕ್ಟಿರಿಯಾಗಳು ಪತ್ತೆಯಾಗಿವೆ. ಇದೊಂದು ಗಂಭೀರ ವಿಷಯವಾಗಿದ್ದು, ತಿಳಿಯದಿರುವ ಬ್ರಾಂಡ್​ಗಳ ಬಾಟಲ್​ಗಳನ್ನು ಕೊಳ್ಳುವಾಗ ಎಚ್ಚರಿಕೆ ವಹಿಸುವಂತೆ ಸಚಿವರು ಸಲಹೆ ನೀಡಿದ್ದಾರೆ. ಇಂತಹ ಕಳಪೆ ಗುಣಮಟ್ಟದ ನೀರಿನ ಬ್ರಾಂಡ್​ಗಳ ಘಟಕಗಳ ಮೇಲೆ ಕಾನೂನು ಕ್ರಮಕ್ಕೆ ಇಲಾಖೆ ಮುಂದಾಗಿರುವುದಾಗಿ ಗುಂಡೂರಾವ್​ ಹೇಳಿದರು. ಅಲ್ಲದೆ, ಗುಣಮಟ್ಟ ಕುರಿತಂತೆ ಕಾನೂನು ನಿಯಮದಂತೆ ಮತ್ತೊಮ್ಮೆ ಪರಿಶೀಲನೆ ನಡೆಸಿ ಬಳಿಕ ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದ್ದಾರೆ.

ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ವಸ್ತುಗಳನ್ನು ಗ್ರಾಹಕರಿಗೆ ದೊರಕುವಂತೆ ಮಾಡುವುದು ಇಲಾಖೆಯ ಮುಖ್ಯ ಉದ್ದೇಶ ಆಗಿದೆ. ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತದೆ ಎಂದರು.

ಔಷಧಾಲಯ ಪರೀಕ್ಷಾ ಪ್ರಯೋಗ: ಔಷಧ ಆಡಳಿತ ವಿಭಾಗದ ಅಮಲು ಜಾರಿ ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಮಾರ್ಚ್‌ ತಿಂಗಳಲ್ಲಿ ಒಟ್ಟು 1,891 ಔಷಧ ಮಾದರಿಗಳನ್ನು ವಿಶ್ಲೇಷಣೆ ನಡೆಸಲಾಗಿದೆ. ಇವುಗಳಲ್ಲಿ 1,298 ಉತ್ತಮ ಗುಣಮಟ್ಟದ ಔಷಧಗಳೆಂದು ಘೋಷಿತವಾಗಿವೆ. ಮತ್ತು 41 ಗುಣಮಟ್ಟವಲ್ಲದ ಔಷಧಿಗಳೆಂದು ಘೋಷಿತವಾಗಿದೆ ಎಂದು ಮಾಹಿತಿ ನೀಡಿದರು.

ಸುಧಾರಣಾ ಕ್ರಮಗಳು: ಗುಣಮಟ್ಟವಲ್ಲದ ಘೋಷಿತವಾದ ಔಷಧಗಳನ್ನು ಸಾರ್ವಜನಿಕರ ಉಪಯೋಗಕ್ಕೆ ಲಭ್ಯವಾಗದಂತೆ ತಡೆಯುವ ನಿಟ್ಟಿನಲ್ಲಿ ಸದರಿ ದಾಸ್ತಾನುಗಳನ್ನು ಹಿಂಪಡೆಯಲು, ಚಿಲ್ಲರೆ ಔಷಧ ಮಳಿಗೆಗಳು, ಸಗಟು ಮಾರಾಟಗಾರರು ತಯಾರಿಕಾ ಸಂಸ್ಥೆಗಳ ವಿವರಗಳನ್ನು ಗಣಕೀಕರಣಗೊಳಿಸಲಾಗುತ್ತಿದೆ. ಶೀಘ್ರದಲ್ಲಿ ಸದರಿ ತಂತ್ರಾಂಶವನ್ನು ಜಾರಿಗೆ ತರಲಾಗುವುದು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ