Breaking News

ಮಾಜಿ ಸಚಿವ ಬಿ.ನಾಗೇಂದ್ರಗೆ ಶಿಕ್ಷೆ ವಿಧಿಸಿದ ಕೋರ್ಟ್

Spread the love

ಬೆಂಗಳೂರು, ಏಪ್ರಿಲ್​ 09: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿನ ಅಕ್ರಮ ಹಣ ವರ್ಗಾವಣೆ (Valmiki Corporation scam) ಕೇಸ್​ನ ಆರೋಪಿ,

ಮಾಜಿ ಸಚಿವ ಬಿ.ನಾಗೇಂದ್ರಗೆ (B Nagendra) ಚೆಕ್‌ಬೌನ್ಸ್‌ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ. ಚೆಕ್​​ಬೌನ್ಸ್​ ಪ್ರಕರಣದಲ್ಲಿ ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ

ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.

ಮಾಜಿ ಸಚಿವ ಬಿ.ನಾಗೇಂದ್ರ, ಅನಿಲ್ ರಾಜಶೇಖರ್ ಮತ್ತು ಚುಂಡೂರು ಭಾಸ್ಕರ್ ಮೂವರು ಆರೋಪಿಗಳ ವಿರುದ್ಧ ವಿಎಸ್ಎಲ್​ ಸ್ಟೀಲ್ಸ್ ಲಿಮಿಟೆಡ್ ಚೆಕ್‌ಬೌನ್ಸ್ ಕೇಸ್ ದಾಖಲಿಸಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ