Breaking News

ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಮಂಜುನಾಥ್ ಗೌಡ ಬಂಧನ; ನಕಲಿ ಚಿನ್ನದ ಕೇಸ್​ನಲ್ಲಿ ಶಕ್ಕೆ ಪಡೆದ ED

Spread the love

ಬೆಂಗಳೂರು, (ಏಪ್ರಿಲ್ 09): ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Shivamogga DCC Bank ) ಹಗರಣ ಪ್ರಕರಣದಲ್ಲಿ ಬ್ಯಾಂಕ್‍ನ ಅಧ್ಯಕ್ಷ ಮಂಜುನಾಥ್ ಗೌಡ (Manjunath Gowda) ಅವರನ್ನು ಜಾರಿ ನಿರ್ದೇಶನಾಲಯದ (Enforcement Directorate) ಅಧಿಕಾರಿಗಳು ಬಂಧಿಸಿದ್ದಾರೆ. ನಕಲಿ ಚಿನ್ನ ಅಡವಿಟ್ಟು 62 ಕೋಟಿ ರೂ ಸಾಲ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ನಿನ್ನೆ(ಏಪ್ರಿಲ್ 08) ಡಿಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದರು.

ಅಲ್ಲದೇ ಮಂಜುನಾಥ್ ಅವರನ್ನು ವಶಕ್ಕೆ ಪಡೆದುಕೊಂಡು ಬೆಂಗಳೂರಿನ ಚಾಮರಾಜಪೇಟೆಯ ಅಪೆಕ್ಸ್ ಬ್ಯಾಂಕ್ ಅತಿಥಿಗೃಹದಲ್ಲಿ ವಿಚಾರಣೆ ಸಹ ನಡೆಸಿದ್ದರು. ಬಳಿಕ ಇಡಿ, ಶಿವಮೊಗ್ಗ ಡಿಸಿಸಿ ಅಧ್ಯಕ್ಷ ಮಂಜುನಾಥ್ ಗೌಡ ಅವರನ್ನು ಅಧಿಕೃತವಾಗಿ ಬಂಧಿಸಿ ಕೋರ್ಟ್​​ಗೆ ಹಾಜರುಪಡಿಸಿದ್ದು,

ಇದೀಗ ಕೋರ್ಟ್​, ಮಂಜುನಾಥ ಗೌಡ ಅವರನ್ನು 14 ದಿನ ಇಡಿ ಕಸ್ಟಡಿಗೆ ನೀಡಿದೆ.ಡಿಸಿಸಿ ಬ್ಯಾಂಕ್​ ಅಧ್ಯಕ್ಷ ಮಂಜುನಾಥ ಗೌಡಗೆ ಆರೋಗ್ಯ ಸಮಸ್ಯೆ ಹಿನ್ನೆಲೆ ಅಗತ್ಯ ವೈದ್ಯಕೀಯ ಸವಲತ್ತು ನೀಡುವಂತೆ ನ್ಯಾಯಾಲಯ ಸೂಚನೆ ನೀಡಿದೆ. ಅಲ್ಲದೇ ದಿನದಲ್ಲಿ 30 ನಿಮಿಷ ವಕೀಲರಿಂದ ಮಂಜುನಾಥ್ ಗೌಡ ಭೇಟಿಗೆ ಕೋರ್ಟ್​​ ಅವಕಾಶ ನೀಡಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ