Breaking News

ಜಮೀನು ವಿಚಾರಕ್ಕೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

Spread the love

ರಾಮನಗರ, ಏಪ್ರಿಲ್​ 10: ಹಾಡಹಗಲೇ ಬಾರ್ ಮುಂದೆ ಅಟ್ಟಾಡಿಸಿ ಕೊಲೆಗೈದಿದ್ದ (kill) 12 ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ (Life Sentences) ಕನಕಪುರ 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶರಾದ ಕುಮಾರ ಎಚ್​ಎನ್​ ಅವರಿಂದ ಗುರುವಾರ ಆದೇಶ ಹೊರಡಿಸಲಾಗಿದೆ. ಮಾದೇಶ್, ಶಿವಕುಮಾರ್, ಲೋಕೇಶ್, ಕಾರ್ತಿಕ್, ವೇಣುಗೋಪಾಲ್, ದಿಲೀಪ್‌ ರಾಜ್, ರಾಮಚಂದ್ರ, ಗುರಪ್ಪ, ರಘು, ದಶರಥ, ಹರೀಶ್ ಮತ್ತು ಸುರೇಶ್ ಜೀವಾವಧಿ ಶಿಕ್ಷೆಗೆ ಗುರಿಯಾದವರು.

ನಡೆದದ್ದೇನು?

2021ರ ಆಗಸ್ಟ್ 8 ರಂದು ಜಿಲ್ಲೆಯ ಕನಕಪುರ ತಾಲೂಕಿನ ಹುಣಸನಹಳ್ಳಿ ಬಾರ್ ಬಳಿ‌ ಭೀಕರ ಕೊಲೆ ನಡೆದಿತ್ತು. ತಮಿಳುನಾಡು ಮೂಲದ ಶಂಕರ ಎಂಬಾತನನ್ನ ಬಾರ್ ಮುಂದೆ ಅಟ್ಟಾಡಿಸಿ ಕೊಲೆ ಮಾಡಲಾಗಿತ್ತು. ಜಮೀನು ವಿಚಾರವಾಗಿ ದಾಯಾದಿಗಳ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ