Breaking News

ಜಮಖಂಡಿ, ರಬಕವಿ-ಬನಹಟ್ಟಿ ತಾಲ್ಲೂಕಿನಲ್ಲಿ ನೀರಿನ ಅಭಾವ

Spread the love

ಜಮಖಂಡಿ, ರಬಕವಿ-ಬನಹಟ್ಟಿ ತಾಲ್ಲೂಕಿನಲ್ಲಿ ನೀರಿನ ಅಭಾವ
ಹಿಪ್ಪರಗಿ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 0.20 ಟಿಎಂಸಿ ನೀರು ಬಿಡುಗಡೆ
ಬಾಗಲಕೋಟೆ ಜಿಲ್ಲೆಯ ಜಮಖಂಡಿ, ರಬಕವಿ-ಬನಹಟ್ಟಿ ತಾಲ್ಲೂಕಿನಲ್ಲಿ ನೀರಿನ ಅಭಾವ ಸೃಷ್ಟಿಯಾದ ಹಿನ್ನಲೆ ನೀರಾವರಿ ಇಲಾಖೆಯಿಂದ ಹಿಪ್ಪರಗಿ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ 0.20 ಟಿಎಂಸಿ ನೀರನ್ನು ಹರಿಬಿಡಲಾಗಿದೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ, ರಬಕವಿ-ಬನಹಟ್ಟಿ ತಾಲ್ಲೂಕಿನಲ್ಲಿ ನೀರಿನ ಅಭಾವ ಸೃಷ್ಟಿಯಾದ ಹಿನ್ನಲೆ ಅಧಿಕಾರಿಗಳು ಹಿಪ್ಪರಗಿ ಬ್ಯಾರೇಜ್ ನಿಂದ ಕೃಷ್ಣಾ ನದಿಗೆ ನೀರು ಹರಿಸಲಾಗಿದೆ. ಹಿಪ್ಪರಗಿ ಬ್ಯಾರೇಜ್ ನಿಂದ ನದಿಗೆ 0.20 ಟಿಎಂಸಿ ನೀರು ಬಿಡುಗಡೆ ಮಾಡಲಾಗಿದೆ. ಕುಡಿಯುವ ಉದ್ದೇಶಕ್ಕಾಗಿ ಮಾತ್ರ ನೀರು ಬಿಡುಗಡೆ ಮಾಡಲಾಗಿದೆ ಎಂದು ನೀರಾವರಿ ಅಧಿಕಾರಿಗಳು ಸೂಚಿಸಿದ್ದಾರೆ.
ನದಿ ತೀರದ ಮುತ್ತೂರು, ಮೈಗೂರು, ಕಂಕನವಾಡಿ, ತುಬಚಿ ಸೇರಿ ಹಲವು ಗ್ರಾಮಗಳಲ್ಲಿ ಸೃಷ್ಟಿಯಾಗಿದ್ದ ನೀರಿನ ಅಭಾವ ನೀಗಿಸಲು ಕ್ರಮಕೈಗೊಳ್ಳಲಾಗಿದೆ. ಬೇಸಿಗೆ ಸಮಯದಲ್ಲಿ ಕೃಷ್ಣಾ ನದಿ ನೀರು ಬತ್ತಿ ಹೋದ ಹಿನ್ನೆಲೆ ಜನಜಾನುವಾರುಗಳಿಗೆ ತೊಂದರೆಯುಂಟಾಗಿತ್ತು. ನೀರು ಹರಿಸಿದ ಹಿನ್ನೆಲೆ ನೀರಿನ ಬವಣೆ ದೂರಾದಂತಾಗಿದೆ.

Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ