Breaking News

ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನವಾಗಬಹುದು ಎಂದ ಕೇಂದ್ರ ಸಚಿವ ವಿ.ಸೋಮಣ್ಣ

Spread the love

ಬೆಂಗಳೂರು: ಜಾತಿ ಜನಗಣತಿ ವರದಿ ಸಿದ್ದರಾಮಯ್ಯಗೆ ಮರಣ ಶಾಸನವಾಗಬಹುದು. ಹಾಗಾಗಿ, ವರದಿ ತಿರಸ್ಕರಿಸಲಿ ಎಂದು ಕೇಂದ್ರ ಸಚಿವ ವಿ‌.ಸೋಮಣ್ಣ ಆಗ್ರಹಿಸಿದರು.

ಬೆಂಗಳೂರಿನಲ್ಲಿಂದು ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್‌ ನಾಯಕರೇ ಕರೆದು ಹೇಳಿದ್ದಾರೆ. ಸಿದ್ದರಾಮಯ್ಯರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ? ಅನ್ನೋ ನೋವು ನನ್ನನ್ನು ಕಾಡುತ್ತಿದೆ. ಜಾತಿ ಜನಗಣತಿ ವರದಿ ಕಾಗಕ್ಕ ಗೂಬಕ್ಕ ಕತೆಯಂತಿದೆ. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಈ ಪಿತೂರಿ ಮಾಡ್ತಿದ್ದಾರೆ. ಜಾತಿ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲೊಬ್ಬ ಖಳನಾಯಕ ಆಗ್ತಾರೆ ಎಂದರು.

ಮತ್ತೊಂದು ಸಮೀಕ್ಷೆ ಮಾಡಿ. ಇನ್ನೂ ಮೂರು ವರ್ಷ ಸಮಯ ಇದೆ ಸಿದ್ದರಾಮಯ್ಯಗೆ. ಈ ಸಮೀಕ್ಷೆ ವೈಜ್ಞಾನಿಕವಾಗಿ ನಡೆದಿಲ್ಲ. ಪಾರದರ್ಶಕವಾಗಿಯೂ ಇಲ್ಲ. ವರದಿ ಜಾರಿಯಾದರೆ ಸಾಮಾನ್ಯ ಜನರೂ ಸಿದ್ದರಾಮಯ್ಯಗೆ ಶಾಪ ಹಾಕ್ತಾರೆ. ಅವರು ಒಂಟಿಯಾಗಿ ಹೋಗ್ತಾರೆ ಎಂದು ತಿಳಿಸಿದರು.

ಯತ್ನಾಳ್ ಘರ್ ವಾಪಸಿ ಬಗ್ಗೆ ಕೆಲವರ ಒಲವು ವಿಚಾರವಾಗಿ ಮಾತನಾಡಿ, ಸಮಯ ಎಲ್ಲಕ್ಕೂ ಕೂಡಿ ಬರುತ್ತೆ. ಒಳ್ಳೆಯವರಿಗೆ ಒಳ್ಳೆ ಕಾಲ ಬರುತ್ತೆ. ಬಹಿರಂಗವಾಗಿ ಮಾತಾಡೋದನ್ನು ನಿಲ್ಲಿಸಿದ್ರೆ ಅವರಿಗೂ ಕ್ಷೇಮ, ನಮಗೂ ಕ್ಷೇಮ ಎಂದು ಸೂಚ್ಯವಾಗಿ ತಿಳಿಸಿದರು.


Spread the love

About Laxminews 24x7

Check Also

ಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ

Spread the loveಎನ್.ಕೆ. ಎಜುಕೇಶನ್ ಸೊಸೈಟಿಯ ಎಸ್‌ಎಸ್‌ಎ ಪಿಯು ಕಾಲೇಜಿನ ಅದ್ಭುತ ಫಲಿತಾಂಶ ಬೆಳಗಾವಿ: ಎನ್.ಕೆ. ಎಜುಕೇಶನ್ ಸೊಸೈಟಿಯ ಅಧೀನದಲ್ಲಿರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ