Breaking News

500ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಬ್ಯಾಂಕ್​​​ ಜನಾರ್ಧನ್​​ ​ಇನ್ನಿಲ್ಲ

Spread the love

ಕನ್ನಡ ಚಿತ್ರರಂಗದ ಹಿರಿಯ ಪೋಷಕ ನಟ ಬ್ಯಾಂಕ್​​​ ಜನಾರ್ಧನ್​​​ ತಮ್ಮ 76ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮುಂಜಾನೆ ಮೃತಪಟ್ಟಿದ್ದಾರೆ. ಚಂದನವನದ ಖ್ಯಾತ ಹಾಸ್ಯನಟನ ನಿಧನಕ್ಕೆ ಸಂತಾಪ ವ್ಯಕ್ತವಾಗುತ್ತಿದೆ. ​​

ಸಂಜೆ ಅಂತ್ಯಕ್ರಿಯೆ: ಬಹುದಿನಗಳಿಂದ ವಯೋಸಹಜ ಕಾಯಿಲೆ ವಿರುದ್ಧ ಹೋರಾಡುತ್ತಿದ್ದ ಜನಪ್ರಿಯ ನಟ ಮುಂಜಾನೆ 3 ಗಂಟೆ ಸುಮಾರಿಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಅವರ ನಿವಾಸದಲ್ಲಿ ಪಾರ್ಥೀವ ಶರೀರ ಇಡಲಾಗಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ವರದಿಗಳು ಸೂಚಿಸಿವೆ.

ಕಿರುತೆರೆ to ಹಿರಿತೆರೆ: 80-90ರ ದಶಕದ ಸಂದರ್ಭ ಬೇಡಿಕೆ ಹೊಂದಿದ್ದ ಇವರು ಶ್, ತರ್ಲೆ ನನ್ಮಗ, ನ್ಯೂಸ್​ನಂತಹ ಹಿಟ್​ ಚಿತ್ರಗಳಲ್ಲಿ ಗಮನಾರ್ಹ ಪಾತ್ರಗಳನ್ನು ನಿರ್ವಹಿಸಿದ್ದಾರೆ. ಪಾಪ ಪಾಂಡು, ಮಾಂಗಲ್ಯ, ಜೋಕಾಲಿ, ರೋಬೋ ಫ್ಯಾಮಿಲಿಯಂತಹ ಸಾಲು ಸಾಲು ಸೀರಿಯಲ್​​ಗಳಲ್ಲಿಯೂ ಬಣ್ಣ ಹಚ್ಚಿದ್ದಾರೆ. ಸುಮಾರು 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಕಾಣಿಸಿಕೊಂಡು ಪ್ರೇಕ್ಷಕರನ್ನು ರಂಜಿಸಿದ್ದಾರೆ.1949ರಲ್ಲಿ ಚಿತ್ರದುರ್ಗದ ಹೊಳಲ್ಕೆರೆಯಲ್ಲಿ ಜನಿಸಿದ ಬ್ಯಾಂಕ್​​ ಜನಾರ್ಧನ್​​​, ಕಾಮಿಡಿ ರೋಲ್​ಗಳ ಮೂಲಕ ಕನ್ನಡಿಗರ ಮನೆ ಮಾತಾಗಿದ್ದರು. ನೂರಾರು ಚಿತ್ರಗಳಲ್ಲಿನ ಅಭಿನಯ ಇವರಿಗೆ ವಿಭಿನ್ನ ಜನಪ್ರಿಯತೆ ತಂದುಕೊಟ್ಟಿತ್ತು. ಗಣೇಶ ಸುಬ್ರಮಣ್ಯ, ಪೊಲೀಸನ ಹೆಂಡತಿ, ಚೆಲುವ, ದೇವ, ರಂಬೆ ಊರ್ವಶಿ ಮೇನಕೆ, ಮಿಸ್ಟರ್ ಬಕ್ರ, ರಕ್ತ ಕಣ್ಣೀರು, ರಂಗ ಎಸ್​ಎಸ್​ಎಲ್​ಸಿ, ಇತ್ತೀಚಿನ ವರ್ಷಗಳಲ್ಲಿ ಪವರ್​​, ಕೋಟಿಗೊಬ್ಬ 2 ಸೇರಿ ನೂರಾರು ಸಿನಿಮಾಗಳಲ್ಲಿ ಕಾಣಿಸಿಕೊಂಡಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ