Breaking News

ಹುಬ್ಬಳ್ಳಿ ಬಾಲಕಿ ಕೊಲೆ ಪ್ರಕರಣ: ‘ಮಗುವಿನ ಮುಖ ನೋಡಲು ಆಗುತ್ತಿಲ್ಲ’: ಸಚಿವ ಸಂತೋಷ್​ ಲಾಡ್

Spread the love

ಹುಬ್ಬಳ್ಳಿ(ಧಾರವಾಡ): “5 ವರ್ಷದ ಮಗುವಿನ ಮೇಲೆ ಅತ್ಯಾಚಾರ ಯತ್ನ ಹಾಗೂ ಕೊಲೆ ಇಡೀ ಸಮಾಜ ತಲೆ ತಗ್ಗಿಸುವ ವಿಚಾರ. ಮಗುವಿನ ಮುಖ ನೋಡಲು ಆಗುತ್ತಿಲ್ಲ” ಎಂದು ಜಿಲ್ಲಾ ಉಸ್ತುವಾರಿ ಹಾಗೂ ಕಾರ್ಮಿಕ ಸಚಿವ ಸಂತೋಷ್​ ಲಾಡ್ ಪ್ರತಿಕ್ರಿಯಿಸಿದ್ದಾರೆ.

ಹುಬ್ಬಳ್ಳಿಯ ಕಿಮ್ಸ್​​ ಶವಾಗಾರಕ್ಕೆ ಭೇಟಿ ನೀಡಿ ಮೃತ ಮಗುವನ್ನು ನೋಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು “ಬಾಲಕಿಯನ್ನು ಹತ್ಯೆ ಮಾಡಿದ ಆರೋಪಿ ಡ್ರಗ್ ಸೇವನೆ ಬಗ್ಗೆ ಮಾಹಿತಿ ಇಲ್ಲ. ಆರೋಪಿ ಮರಣೋತ್ತರ ಪರೀಕ್ಷೆ ಬಳಿಕ ಗೊತ್ತಾಗಲಿದೆ. ಅಲ್ಲದೇ ಹುಬ್ಬಳ್ಳಿಯಲ್ಲಿ ಇನ್ನು ಮುಂದೆ ಮಹಿಳೆಯರಿಗೆ ಸುರಕ್ಷಿತ ಕ್ರಮ ಕೈಗೊಳ್ಳಲಾಗುತ್ತದೆ” ಎಂಬ ಭರವಸೆ ನೀಡಿದರು.

“ಹುಬ್ಬಳ್ಳಿ, ಧಾರವಾಡದ ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಿ ಸಿಸಿ ಕ್ಯಾಮೆರಾಗಳ ಅಳವಡಿಕೆ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಬಾಲಕಿ ಕುಟುಂಬಕ್ಕೆ ಈಗಾಗಲೇ ಪರಿಹಾರ ಘೋಷಣೆ ಮಾಡಿದೆ. ಜಮೀರ್ ಅಹ್ಮದ್ ಕೂಡ ವಸತಿ ಇಲಾಖೆಯಿಂದ ಮೃತ ಬಾಲಕಿ ಕುಟುಂಬಸ್ಥರಿಗೆ ಮನೆ ನೀಡುವ ಭರವಸೆ ನೀಡಿದ್ದಾರೆ. ಸರ್ಕಾರದ ಜೊತೆ ಮಾತನಾಡಿ ಇನ್ನೂ ಹೆಚ್ಚಿನ ಪರಿಹಾರಕ್ಕಾಗಿ ಮನವಿ ಮಾಡುತ್ತೇನೆ” ಎಂದು ಸಚಿವರು ಇದೇ ವೇಳೆ ಭರವಸೆ ನೀಡಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ