Breaking News

ಮೋದಿ ನಿಮ್ಮ ಸರ್ಕಾರ ಬೀಳಿಸುತ್ತಾರೆ, ಹುಷಾರಾಗಿರಿ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್​ಗೆ ಖರ್ಗೆ ಎಚ್ಚರಿಕೆ

Spread the love

ಕಲಬುರಗಿ, ಏಪ್ರಿಲ್​ 16: ಕರ್ನಾಟಕದ (Karnataka) ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ (CM) ಬದಲಾವಣೆಯ ಚರ್ಚೆ ಜೋರಾಗಿದೆ. ಇದರ ನಡುವೆಯೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ​ ಖರ್ಗೆ (Mallikarjun Kharge) ಅವರು ಬಿಜೆಪಿಯ ಕೇಂದ್ರ ನಾಯಕರ ವಿರುದ್ಧ ಗಂಭೀರ ಆರೋಪವೊಂದು ಮಾಡಿದ್ದಾರೆ. “ಕರ್ನಾಟಕದಲ್ಲಿನ ಕಾಂಗ್ರೆಸ್ ಸರ್ಕಾರ ತೆಗೆಯಲು ಪ್ಲ್ಯಾನ್ ನಡೆದಿದೆ. ಪ್ರಧಾನಿ ನರೇಂದ್ರ ಮೋದಿ (Narendra Modi) ನಿಮ್ಮ ಸರ್ಕಾರವನ್ನು ಬೀಳಿಸುತ್ತಾರೆ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ನಡೆದ ವಿಭಾಗ‌ ಮಟ್ಟದ ಉದ್ಯೋಗ ಮೇಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಿಮ್ಮಲ್ಲಿ ಏನೇ ಮನಸ್ತಾಪ ಇದ್ದರೂ ಒಗ್ಗಟ್ಟಾಗಿರಬೇಕು. ನೀವು ಹುಷಾರಾಗಿರಬೇಕು ಎಂದು ವೇದಿಕೆ ಮೇಲಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್​ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಕಿವಿಮಾತು ಹೇಳಿದರು.

 


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ